May 19, 2024

MALNAD TV

HEART OF COFFEE CITY

ಸಹಸ್ರಾರು ಬೆಂಬಲಿಗರೊ0ದಿಗೆ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ನಾಮಪತ್ರ ಸಲ್ಲಿಕೆ

1 min read

ಮುಂಬರುವ ಮೇ.10 ರಂದು ನಡೆಯುವ ವಿಧಾನಸಭಾ ಚುನವಣೆಗೆ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಸಿ.ಟಿ.ರವಿ ಅವರು ಸಹಸ್ರಾರು ಬೆಂಬಲಿಗರೊ0ದಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದರು.
ಬೆಳಗ್ಗೆ ಬಸವನಹಳ್ಳಿ ಮುಖ್ಯ ರಸ್ತೆಯ ತಮ್ಮ ನಿವಾಸದಿಂದ ಕಾಮಧೇನು ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ,ಹೋಮ, ಹವನದಲ್ಲಿ ಭಾಗವಹಿಸಿದರು. ನಂತರ ತಾಲ್ಲೂಕು ಕಚೇರಿ ವರೆಗೆ ಬೆಂಬಲಿಗರೊ0ದಿಗೆ ಕಾಲ್ನಡಿಗೆಯಲ್ಲೇ ತೆರಳಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಅವರ ಪತ್ನಿ ಪಲ್ಲವಿ ಸಿ.ಟಿ.ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಈಶ್ವರಳ್ಳಿ ಮಹೇಶ್, ರಾಜ್ಯ ಸಫಾಯಿ ಕರ್ಮಚಾರ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್ ಜೊತೆಗಿದ್ದರು.
ಕ್ಷೇತ್ರದ ಎಲ್ಲಾ ಹೋಬಳಿಗಳಿಂದಲೂ ಆಗಮಿಸಿದ್ದ ಸಹಸ್ರಾರು ಮುಖಂಡರು, ಕಾರ್ಯಕರ್ತರು ಸಿ.ಟಿ.ರವಿ ಅವರ ಪರವಾಗಿ ಘೋಷಣೆ ಹಾಕಿದರು. ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿ.ಟಿ.ರವಿ ಎಂದು ಕೂಗಿದರು. ಅಲ್ಲಲ್ಲಿ ಪಟಾಕಿ ಸಿಡಿಸಿ, ಕುಣಿದು ಸಂಭ್ರಮಿಸಿದರು. ಇನ್ನೂ ಕೆಲವರು ಸಿ.ಟಿ.ರವಿ ಅವರ ಗೆಲುವಿಗೆ ಪ್ರಾರ್ಥಿಸಿ ತಮ್ಮ ಊರುಗಳ ಗ್ರಾಮದೇವರಿಗೆ ಪೂಜೆ ಸಲ್ಲಿಸಿ ತಂದಿದ್ದ ಪ್ರಸಾದವನ್ನು ರವಿ ಅವರಿಗೆ ತಲುಪಿಸಿದರು.
ಮಾರ್ಗದುದ್ದಕ್ಕೂ ಹಲವು ಮಂದಿ ಸಿ.ಟಿ.ರವಿ ಅವರಿಗೆ ಹಾರ ಹಾಕಿ ಶುಭ ಕೋರಿದರು. ಇದೇ ವೇಳೆ ಶಾಸಕರು ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ನಾಮಪತ್ರ ಸಲ್ಲಿಸುವ ವೇಳೆ ಯಾವುದೇ ಒತ್ತಡ, ಉದ್ವೇಗಗಳಿಲ್ಲದೆ ನಿರಾಳರಾಗಿದ್ದ ಸಿ.ಟಿ.ರವಿ ಉಮೇದುವಾರಿಕೆ ಸಲ್ಲಿಸಿದ ನಂತರ ತಾಲ್ಲೂಕು ಕಚೇರಿ ಆವರಣದಲ್ಲಿನ ಮರದ ಕೆಳಗೆ ನಿಂತು ತಮ್ಮ ಪತ್ನಿ ಹಾಗೂ ಪುತ್ರನೊಂದಿಗೆ ಫೊಟೋ ತೆಗೆಸಿಕೊಂಡರು.
ಕಿಡ್ನಿ ಸ್ಟೋನ್ಸ್ ಶಸ್ತçಚಿಕಿತ್ಸೆಗೊಳಗಾಗಿದ್ದ ಸಿ.ಟಿ.ರವಿ ಭಾನುವಾರ ಸಂಜೆ ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. ಸೋಮವಾರ ಬೆಳಗ್ಗೆ ತಮ್ಮ ಸ್ವಗ್ರಾಮ ಚಿಕ್ಕಮಾಗರವಳ್ಳಿಗೆ ತೆರಳಿ ಗ್ರಾಮದೇವತೆಗೆ ಪೂಜೆ ಸಲ್ಲಿಸಿದರು ನಂತರ ತಮ್ಮ ತಾಯಿ ಹೊನ್ನಮ್ಮ ಅವರಿಂದ ಆಶೀರ್ವಾದ ಪಡೆದು ನಂತರ ಚಿಕ್ಕಮಗಳೂರಿಗೆ ಆಗಮಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!