May 19, 2024

MALNAD TV

HEART OF COFFEE CITY

ಬಿಜೆಪಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ_ಸಿದ್ಧರಾಮಯ್ಯ

1 min read

ಚಿಕ್ಕಮಗಳೂರು: ಬಿಜೆಪಿಗೆ ಸಮಾಜಿಕ ನ್ಯಾಯ, ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಹಾಯ್ದರು.

ನಗರದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಜನ ಸ್ವರಾಜ್ಯ ಯಾತ್ರೆ ಆರಂಭಿಸಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿ ಅವರೇ ಅಧಿಕಾರದಲ್ಲಿದ್ದರೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡಲಿಲ್ಲ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇದ್ದಿದ್ದರೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಮುಂದೂಡುತ್ತಿರಲಿಲ್ಲ. ಚುನಾವಣೆ ಮು೦ದೂಡಲು ಒಂದು ಕಾನೂನು ಬೇರೆ ತಂದಿದ್ದಾರೆ. ಚುನಾವಣೆ ನಡೆಸುವ ವಿಚಾರದಲ್ಲಿ ಬಿಜೆಪಿಯವರಿಗೆ ಬದ್ಧತೆ ಇಲ್ಲ. ಮೋದಿಯವರು ಪ್ರಧಾನಿಯಾಗಿ ಎಂಟು ವರ್ಷಗಳಾದರೂ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಶಕ್ತಿ ತುಂಬಲಿಲ್ಲ. ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ. ಸಾಮಾಜಿಕ ನ್ಯಾಯ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿರುವ ಬಿಜೆಪಿಯವರಿಗೆ ಜನ ಸ್ವರಾಜ್ಯ ಯಾತ್ರೆ ನಡೆಸಲು ನೈತಿಕ ಹಕ್ಕಿಲ್ಲ ಎಂದರು.

ಪಂಚಾಯತ್ ರಾಜ್ ವ್ಯವಸ್ಥೆ, ಸಾಮಾಜಿಕ ನ್ಯಾಯದ ಬಗ್ಗೆ ಒಂದು ದಿನವೂ ಬಿಜೆಪಿ ನಾಯಕರು ಮಾತಾಡಿಲ್ಲ. ಅವರಿಗೆ ಆ ಕುರಿತು ಬದ್ಧತೆಯೇ ಇಲ್ಲ. ಇಂಥವರು ಗೆದ್ದು ಬ೦ದರೆ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದರು. ಕ್ಷೇತ್ರದಿಂದ ಕಳೆದ ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹೋದ ಪ್ರಾಣೇಶ್ ಒಂದು ದಿನವೂ ಪಂಚಾಯತ್ ರಾಜ್ ವ್ಯವಸ್ಥೆ ಕುರಿತು ಮಾತಾಡಿಲ್ಲ. ಯಾವುದೇ ಪಂಚಾಯತಿಗೆ ಹೋಗಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ಕೊಟ್ಟಿದ್ದರೆ ಅದು ಕಾಂಗ್ರೆಸ್. ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದರು. ನರಸಿಂಹರಾವ್ ಅವರು ಅದನ್ನು ಜಾರಿಗೊಳಿಸಿದರು.

ರಾಜ್ಯ ಬಿಜೆಪಿ ಸರ್ಕಾರ ಮೂರೂವರೆ ವರ್ಷದಲ್ಲಿ ಬಡವರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಕೊಟ್ಟಿದ್ದರೆ ಸಿ.ಟಿ. ರವಿ ಹೇಳಲಿ. ನಮ್ಮ ಅವಧಿಯಲ್ಲಿ ಮಂಜೂರಾದ ಮನೆಗಳಿಗೆ ಎರಡನೇ ಕಂತಿನ ಅನುದಾನ ಕೊಡದೆ ಲಾಕ್ ಮಾಡಿದರು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ವಿಚಾರದಲ್ಲಿ ಮೋದಿ ಯವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಸತ್ಯ ಹೇಳಬೇಕು ಎಂದು ಒತ್ತಾಯಿಸಿದರು.

ಗುಂಡಾಗಳನ್ನು ಕರೆಸಿಕೊಂಡು ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅದಿಕೃತ ಅಭ್ಯರ್ಥಿ ಇದ್ದರು ಸಹ ರಮೇಶ್ ಜಾರಕಿಹೊಳಿ ಪಕ್ಷದ ವಿರುದ್ಧವೇ ಅವರ ತಮ್ಮ ಲಖನ್ ಜಾರಕಿಹೊಳಿಯನ್ನು ಚುನಾವಣೆಗೆ ನಿಲ್ಲಿಸಿದ್ದಾರೆ ಅವರಿಗೆ ಈ ಹೇಳಿಕೆ ನೀಡಲು ನೈತಿಕತೆ ಇಲ್ಲ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!