May 4, 2024

MALNAD TV

HEART OF COFFEE CITY

ಕಾಂಗ್ರೆಸ್ ಸಂವಿಧಾನ ವಿರೋಧಿ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

1 min read

ಚಿಕ್ಕಮಗಳೂರು-ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದರು.ನಗರದ ಬಿಜೆಪಿಯ ಪಾಂಚಜನ್ಯ ಕಛೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪಾದಯಾತ್ರೆ ಮೂಲಕ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಾ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ ಹೇಳಿಕೆಯನ್ನು ತಿರುಚಿ ಸದನದಲ್ಲಿ ಅದನ್ನೇ ಅಸ್ತ್ರವಾಗಿಸಿಕೊಂಡು ಸದನದ ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.ರಾಜ್ಯದಲ್ಲಿ ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಹೊಂದಿದೆ. ವಿಷಯವನ್ನು ಮರೆಮಾಚಲು ಬೇರೆ ಅಸ್ತ್ರ ಹುಡುಕಿ ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಬೇಕಾದ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಇದು ಸಂವಿಧಾನ ವಿರೋಧಿ ನಡೆ ಎಂದು ಆರೋಪಿಸಿದರು.

ದೇಶದಲ್ಲಿ ರಾಷ್ಟ್ರಪ್ರೇಮ, ಹೊಂದಿರುವ ಪಕ್ಷ ಬಿಜೆಪಿ ಮಾತ್ರ. ಸಿದ್ದರಾಮಯ್ಯ ತಾವೊಬ್ಬರೇ ಅಹಿಂದ ನಾಯಕರಾಗಬೇಕು ಎನ್ನುವ ದುರುದ್ದೇಶ ಹೊಂದಿದ್ದಾರೆ. ಅದಕ್ಕಾಗಿಯೇ ಈಶ್ವರಪ್ಪ ಹೇಳಿಕೆ ತಿರುಚಿ ಜನತೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮೇಕೆದಾಟು ಹೋರಾಟ ನಡೆಸಿದರು ಮುಂದಿನ ದಿನಗಳಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ವಿಪಕ್ಷ ಸ್ಥಾನದಲ್ಲೇ ಇರಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್‍ರಾಜ್‍ಅರಸ್ ಮಾತನಾಡಿ ಮೇಕೆದಾಟು ವಿಚಾರದಲ್ಲಿ ಸತ್ಯಾಂಶವಿಲ್ಲದಿದ್ದರೂ ಕಾಂಗ್ರೆಸ್ ಕೋವಿಡ್ ಲೆಕ್ಕಿಸದೆ ಪಾದಯಾತ್ರೆ ನಡೆಸಿ ಜನರ ಜೀವದ ಜತೆಗೆ ಚೆಲ್ಲಾಟವಾಡುತ್ತಿದೆ. ಅಭಿವೃದ್ಧಿ ಕುರಿತು ಚರ್ಚಿಸಬೇಕಾದ ಸದನದಲ್ಲಿ ಹಿಜಾಬ್, ರಾಷ್ಟ್ರಧ್ವಜದ ವಿಚಾರವನ್ನು ಮುಂದಿಟ್ಟುಕೊಂಡು ಕಲಾಪವನ್ನು ನಡೆಸಲು ಅವಕಾಶ ನೀಡದೆ ಜನರ ಹಣವನ್ನು ಪೋಲು ಮಾಡುತ್ತಿದೆ ಎಂದು ದೂಷಿಸಿದರು.

 

ಹಿಜಾಬ್ ವಿಚಾರ ಒಂದು ಜನಾಂಗಕ್ಕೆ ಸಂಬಂಧಿಸಿದ್ದು ಅದರೇ ಕಾಂಗ್ರೆಸ್‍ಪಕ್ಷ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ, ಸಭಾಪತಿಗಳ ಆದೇಶವನ್ನು ಪಾಲಿಸದೆ ಸಂವಿಧಾನಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.ಗ್ರಾಮಾಂತರ ಮಂಡಲ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅತ್ಯಂತ ಕೀಳು ಮಟ್ಟದ ರಾಜಕಾರಣ ನಡೆಸುತ್ತಿದೆ. ಹಿಜಾಬ್ ವಿಚಾರದಲ್ಲೇ ರಾಜಕೀಯ ಮಾಡುತ್ತಿದೆ. ಸದನವನ್ನು ಸುಗಮವಾಗಿ ನಡೆಸಲು ಅವಕಾಶ ನೀಡದೆ ಧರಣಿ ನಡೆಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಮಸಿಬಳಿಯುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರಬೆಳವಾಡಿ ಮಾತನಾಡಿ ಕಾಂಗ್ರೆಸ್ ಪಕ್ಷ ತಮ್ಮ ಬೇಳೆ ಬೇಯಿಸಿಕೊಳ್ಳಲು ಹಿಜಾಬ್ ಅಸ್ತ್ರವನ್ನು ಪ್ರಯೋಗಿಸಿ ಬೆಂಕಿ ಹಚ್ಚು ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಧರಣಿ ನಡೆಸುವ ಮೂಲಕ ಅಭಿವೃದ್ಧಿ ಬಗ್ಗೆ ಚರ್ಚಿಸಲು ಅವಕಾಶ ನೀಡದೆ ಹಠಮಾರಿ ಧೋರಣೆ ತಳೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜ್ ಶೆಟ್ಟಿ, ಒಬಿಸಿ ಮೋರ್ಚಾದ ಅಧ್ಯಕ್ಷ ಪುಷ್ಪರಾಜ್, ವಕ್ತಾರ ವರಸಿದ್ದಿವೇಣುಗೋಪಾಲ್ ಮುಖಂಡರಾದ ಸಿ.ಆನಂದ್, ಕುರುವಂಗಿ ವೆಂಕಟೇಶ್, ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!