May 11, 2024

MALNAD TV

HEART OF COFFEE CITY

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಇಲ್ಲ : ಆರ್.ಅಶೋಕ್

1 min read

 

 ನಳೀನ್ ಕುಮಾರ್ ಕಟೀಲ್ ಇದ್ದಾರೆ, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ. ಆದರೆ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ, ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭವೂ ಕಾಣುತ್ತಿಲ್ಲ ಎಂದಿದ್ದಾರೆ. ಪಾರ್ಲಿಮೆಂಟ್ ಚುನಾವಣೆ ಇದೆ. ಈಗ ರಾಜ್ಯಾಧ್ಯಕ್ಷರ ಬದಲಾವಣೆ ಆಗೋದಿಲ್ಲ. ಆ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷರು ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ನನ್ನ ಬಳಿ ಯಾವುದೇ ಮಾಹಿತಿ ಇಲ್ಲ ಎಂದರು. ಬಳ್ಳಾರಿಯಲ್ಲಿ ಕಟೀಲ್ ಅವರೇ ರಾಜೀನಾಮೆ ನೀಡಿದ್ದೇನೆ ಎಂಬ ಹೇಳಿಕೆಗೆ ಅವರು ಕೊಟ್ಟರೆ ಹೈಕಮಾಂಡ್ ಅಂಗೀಕಾರ ಮಾಡಬೇಕು. ನಮ್ಮದು ರಾಷ್ಟ್ರೀಯ ಪಕ್ಷ. ದೆಹಲಿಯವರು ಅಂಗೀಕಾರ ಮಾಡಬೇಕಲ್ವಾ ಎಂದರು. ಏಳೆಂಟು ತಿಂಗಳಲ್ಲಿ ಪಾರ್ಲಿಮೆಂಟ್ ಚುನಾವಣೆ ಇದೆ. ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದರು. ಇದೇ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಿವಕುಮಾರ್ ಅವರ ಮುಖ್ಯಮಂತ್ರಿ ಅಲ್ಲ. ಮುಖ್ಯಮಂತ್ರಿ ರೀತಿ ಮಾಡುತ್ತಿದ್ದಾರೆ, ಅವರ ನಡೆ ಅತಿರೇಕದ ನಡೆ ಎಂದು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲ್ಲ. ನನಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ ಎಂದರು. ಸಿದ್ದರಾಮಯ್ಯ ಕೂಡ ನಾನೇ ಸಿಎಂ ಎಂದು ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವ ಎಂದು ಯಾರಿಗೆ ಹೇಳಿದ್ದಾರೆ, ಡಿ.ಕೆ.ಶಿವಕುಮಾರ್ ಅವರಿಗೆ ಹೇಳಿದ್ದು. ಅದು ಜಗಜ್ಜಾಹೀರಾಗಿದೆ. ಅದಕ್ಕಾಗಿ ಈಗಿನಿಂದಲೇ ಓವರ್ ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಅವರ ಕಿರಿಕಿರಿ ಬೀದಿಗೆ ಬಂದರೆ ಈ ಸರಕಾರ ಬಿದ್ದು ಹೋಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

ಸಿಎಂ ಆದವರು ಹಿಂದಿನ ಸಿಎಂರನ್ನ ಭೇಟಿ ಮಾಡೋದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ. ನಿವೃತ್ತ ಮುಖ್ಯಮಂತ್ರಿಯನ್ನ ಭೇಟಿ ಮಾಡಿಲ್ಲ ಎಂದು ಡಿಕೆಶಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇದೇ ವೇಳೆ, ಅಧಿಕಾರ ಕಳೆದುಕೊಂಡ ಬಿಜೆಪಿ ಸೋಲಿನ ಬಗ್ಗೆ ಅಶೋಕ್ ನೋವನ್ನ ವ್ಯಕ್ತಪಡಿಸಿದ್ದಾರೆ. ನಾನು ಎರಡು ಕಡೆ ನಿಂತಿರುವುದು ಸರಿಯೋ…ತಪ್ಪೋ… ಗೊತ್ತಿಲ್ಲ. ಆದರೆ, ನಾನು ಪಕ್ಷದ ಶಿಸ್ತಿನ ಸಿಪಾಯಿ ಪಕ್ಷ ಹೇಳಿತ್ತು ಹಾಗಾಗಿ ನಿಂತೆ ಎಂದರು. ಕನಕಪುರದಲ್ಲಿ ಬಿಜೆಪಿಗೆ ಬೂತ್ ಏಜೆಂಟ್ ಕೂಡ ಇಲ್ಲ. ಕನಕಪುರದಲ್ಲಿ 75 ವರ್ಷದಲ್ಲಿ ಬಿಜೆಪಿ 5000 ಮತ ದಾಟಿಲ್ಲ. ಇಂತಹಾ ಸಂದರ್ಭದಲ್ಲಿ ಹೋರಾಟ ಮಾಡಿ 19500 ಮತ ತೆಗೆದುಕೊಂಡಿದ್ದೇನೆ ಎಂದರು. ಬಿಜೆಪಿಯ ಇಂದಿನ ಸೋಲು ಸಾಂದರ್ಭಿಕ ಸೋಲು ಅಷ್ಟೆ. ಒಳಮೀಸಲಾತಿ, ಎಸ್ಟಿಗಳಿಗೆ 5% ಮೀಸಲಾತಿ ಜಾಸ್ತಿ ಮಾಡಿದ್ದು ನಮಗೆ ಸಮಸ್ಯೆ ತಂದಿರಬಹುದು. ಯಾರಿಗೆ ಬೆನಿಫಿಟ್ ಸಿಕ್ಕಿದ್ಯೋ ಅವರು ನಮ್ಮ ಜೊತೆ ನಿಂತರೋ ಇಲ್ವೋ ಗೊತ್ತಿಲ್ಲ. ಯಾರಿಗೆ ಸೌಲಭ್ಯ ಸಿಕ್ಕಿಲ್ಲ ಅವರು ನಮ್ಮ ವಿರುದ್ಧ ಇರೋದು ಕಾಣುತ್ತಿದೆ. ಗೆದ್ದವರು-ಸೋತವರು ಎಲ್ಲರೂ ಮೀಸಲಾತಿ ಹೊಡೆತ ಬಿದ್ದಿದೆ ಎನ್ನುತ್ತಿದ್ದಾರೆ. ಪಕ್ಷದ ವೇದಿಕೆಯಲ್ಲಿ ಇದನ್ನೆಲ್ಲಾ ಚರ್ಚೆ ಮಾಡುತ್ತೇವೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!