ಸಿ.ಟಿ ರವಿ ಹುಟ್ಟು ಹಬ್ಬದ ಫ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು
1 min read
ಇತ್ತೀಚೆಗೆ ಹುಟ್ಟು ಹಬ್ಬ ಆಚರಿಸಿಕೊಂಡ ಎಂಎಲ್.ಸಿ ಸಿ.ಟಿ ರವಿಗೆ ಶುಭಾಶಯ ಕೋರಲು ಚಿಕ್ಕಮಗಳೂರು ನಗರದ ಹಲವೆಡೆ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಅದೇ ರೀತಿ ಉಪ್ಪಳ್ಳಿ ಸರ್ಕಲ್ ನಲ್ಲಿಯೂ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸೋಷಿಯಲ್ ಮೀಡಿಯಾ ಸಹ ಸಂಚಾಲಕ ಕಲಂದರ್ ಶುಭ ಕೋರಿ ಹಾಕಿದ್ದ ಬ್ಯಾನರ್ ಅನ್ನು ಹರಿದು ಹಾಕಲಾಗಿದೆ. ಇಂದು ಬೆಳಿಗ್ಗೆ ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಬಸವನಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಬಾಬುದ್ದೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಪ್ಪಳ್ಳಿ ಸರ್ಕಲ್ ಸುತ್ತಮುತ್ತಲಿನ ಅಂಗಡಿಗಳ ಸಿ.ಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿರಬಹುದು ಎಂದು ಪೊಲೀಸರು ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಿಜೆಪಿ ಮುಖಂಡ ಕಬೀರ್ ಭೇಟಿ ನೀಡಿದ್ದು ಕೃತ್ಯವನ್ನು ಖಂಡಿಸಿದ್ದಾರೆ. ಅಲ್ಲದೇ ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಸಿ.ಟಿ ರವಿ ವಿರೋಧಿಗಳು ಅಸೂಯೆ ಪಡುವವರು ಈ ರೀತಿ ಮಾಡಿದ್ದಾರೆ ಎಂದು ಕಬೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿ.ಟಿ ರವಿ 57 ನೇ ಹುಟ್ಟು ಹಬ್ಬಕ್ಕೆ ಬ್ಯಾನರ್ ಕಟೌಟ್ ಗಳ ಮೂಲಕ ನಗರದಲ್ಲಿ ಬಿಜೆಪಿ ನೂರಾರು ಕಾರ್ಯಕರ್ತರು ಅಭಿಮಾನಿಗಳು ಕಳೆದ ಜುಲೈ 18 ರಂದು ನಗರದ ಹತ್ತಾರು ಕಡೆ ಶುಭ ಕೋರುವ ಫ್ಲೆಕ್ಸ್ ಹಾಕಿದ್ದರು. ಸದ್ಯ ಪೊಲೀಸ್ ತನಿಖೆ ಮುಂದುವರಿದಿದ್ದು ಕೃತ್ಯ ಎಸಗಿದವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g