May 18, 2024

MALNAD TV

HEART OF COFFEE CITY

ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

1 min read

ಚಿಕ್ಕಮಗಳೂರು. ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದ ಸೇತುವೆ ಬಳಿ ನಡೆದಿದೆ. ಮೃತನನ್ನ ಮೂಡಿಗೆರೆ ಪಟ್ಟಣದ ಬಿಳಗುಳದ ಸುಭಾಶ್ ನಗರದ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಬೈಕಿನಲ್ಲಿ ಹಿಂದೆ ಕೂತಿದ್ದ ವ್ಯಕ್ತಿಗೂ ಗಂಭೀರ ಗಾಯವಾಗಿ ಆತನನ್ನ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಮೂಲತಃ

 

 

 

ಹಾಸನ ಜಿಲ್ಲೆಯವರಾಗಿದ್ದಾರೆ. ಅಪಘಾತಕ್ಕೆ ಕಾರಿನ ಅತಿ ವೇಗವೇ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಸಣ್ಣ-ಪುಟ್ಟ ಗಾಯಗಳಾಗಿವೆ. ಸಣ್ಣ-ಪುಟ್ಟ ಗಾಯಗಳಾಗಿದ್ದ ಕಾರಿನಲ್ಲಿದ್ದವರನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!