May 15, 2024

MALNAD TV

HEART OF COFFEE CITY

ಧರ್ಮಸ್ಥಳಕ್ಕೆ ಹೊರಟಿದ್ದ ಕಾರು ಪ್ರಪಾತಕ್ಕೆ ಪಲ್ಟಿ, ಐವರು ಪಾರು

1 min read

 

ಚಿಕ್ಕಮಗಳೂರು : ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 20 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲಯಮಾರುತ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪುತ್ತಿದ್ದಂತೆ ಕಾರು ಸುಮಾರು 20 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಕಾರಿನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಎಲ್ಲರಿಗೂ ಸಣ್ಣ-ಪುಟ್ಟ ಗಾಯವಾಗಿದ್ದು ಎಲ್ಲರಿಗೂ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಕಳಸ ತಾಲೂಕಿನಲ್ಲೂ ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಹಳ್ಳಕ್ಕೆ ಬಿದ್ದ ಪರಿಣಾಮ ಚೀಪ್ ಚಾಲಕಿ 35 ವರ್ಷದ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊಸಗದ್ದೆಯಿಂದ ಹೊರನಾಡಿಗೆ ಹೋಗುವಾಗ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಜೀಪ್ ಪಲ್ಟಿಯಾದ ಬಳಿಕ ಜೀಪ್ ಹಳ್ಳದ ನೀರಿಗೆ ಬಿದ್ದಿದೆ. ಜೀಪಿನಲ್ಲಿ ಅಕ್ಷತಾ ಒಬ್ಬರೇ ಇದ್ದು, ಅವರೇ ಚಲಾಯಿಸುತ್ತಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೋಗಿ ಅಕ್ಷತಾಳನ್ನ ಮೇಲಕ್ಕೆ ಎತ್ತಿದರೂ ಕೂಡ ಅಷ್ಟರಲ್ಲಿ ಪ್ರಾಣ ಹೋಗಿತ್ತು ಎಂದು ತಿಳಿದು ಬಂದಿದೆ. ಮೃತ ಅಕ್ಷತಾಗೆ 12 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!