ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ – ಹೊತ್ತಿ ಉರಿದ ಮನೆ
1 min read
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯ ಪಾಚ್ ಫಿರ್ ದರ್ಗಾ ಬಳಿ ನಡೆದಿದೆ. ಉಮರ್ ಫಾರೂಕಿ ಎಂಬುವರ ಮನೆಯಲ್ಲಿ ವಾಷಿಂಗ್ ಮಷಿನ್ ಪ್ಲಗ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಬೆಂಕಿ ಕಾಣಿಸಿಕೊಂಡು ಮನೆಯ ಸೀಲಿಂಗ್ ಸೇರಿದಂತೆ ಗೃಹಪಯೋಗಿ ವಸ್ತುಗಳಿಗೆ ಹಾನಿ ಉಂಟಾಗಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ತಕ್ಷಣ ಎಚ್ಚೆತ್ತ ಮನೆಮಂದಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಡಿ.ಎಫ್.ಒ ಪ್ರವೀಣ್ ನೇತೃತ್ವದ ಅಗ್ನಿಶಾಮಕ ಸಿಬ್ಬಂದಿಗಳು ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಡೆದಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

