May 20, 2024

MALNAD TV

HEART OF COFFEE CITY

190 ಕೆಜಿ ಗಾಂಜಾವನ್ನ ನಾಶ ಮಾಡಿದ ಕಾಫಿನಾಡ ಪೊಲೀಸರು

1 min read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾದಕ ವಸ್ತು ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷ ಯ್ ತಿಳಿಸಿದ್ದಾರೆ. ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ವಶಪಡಿಸಿಕೊಂಡ 190.7ಕೆ.ಜಿ. ಗಾಂಜಾವನ್ನು ಹಾಸನ ಕೈಗಾ ರಿಕಾ ಪ್ರದೇಶದಲ್ಲಿರುವ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿ ಸಮ್ಮುಖದಲ್ಲಿ ನಾಶ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಗೃಹ ಸಚಿ ವರ ಮಾರ್ಗದರ್ಶನದಲ್ಲಿ ಜಾಗೃತಿ ವಾಹನಕ್ಕೆ ಚಾಲನೆ ನೀಡಲಾಗಿದೆ. ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಮಾನಸಿಕತೆ ಮೇಲೆ ಬೀರುವ ಪರಿಣಾಮ, ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣಿಕೆ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಕಾನೂನು ಕ್ರಮದ ಮಾಹಿತಿ ಯನ್ನು ಒಳಗೊಂಡಿದೆ ಎಂದು ತಿಳಿಸಿದರು.ಜಾಗೃತಿ ವಾಹನ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಈಗಾಗಲೇ 4ಸಾವಿರಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳನ್ನು ಸೀಜ್ ಮಾಡಲಾಗುತ್ತಿದೆ. ಸೀಮ್ ಮಾಡಿರುವ ಮಾದಕ ವಸ್ತುಗಳನ್ನು ಹಾಸನ ಇಂಡಸ್ಟಿçÃಲ್ ಏರಿಯಾದಲ್ಲಿ 190 ಗಂಜಾವನ್ನು ನಾಶಪಡಿಸಲಾಗಿದೆ ಎಂದರು.

 

 

ಮಾದಕ ವಸ್ತುಗಳ ಮಾರಾಟ ಕಾನೂನು ಬಾಹಿರ ಅಷ್ಟೇ ಮಾದಕ ವಸ್ತುಗಳ ಸೇವನೆಯೂ ಕಾನೂನು ಬಾಹಿರವಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಿಂದ ಜಿಲ್ಲೆಯಲ್ಲಿ ಟೆಸ್ಟಿಂಗ್ ಘಟಕವನ್ನು ಸ್ಥಾಪಿಸಿದ್ದು ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯನ್ನು 24ಗಂಟೆಯೊಳಗೆ ಪ್ರಯೋಗಲಾಯಕ್ಕೆ ಕಳಿಸಿ ಪತ್ತೆ ಹಚ್ಚಲಾಗುವುದು ಎಂದರು.ಜಿಲ್ಲೆಯಲ್ಲಿ ಇದುವರೆಗೂ ಅನುಮಾಸ್ಪದವಾದ 250 ಮಂದಿಯನ್ನು ಪರೀಕ್ಷೆಗೆ ಒಳಡಪಡಿಸ ಲಾಗಿದೆ. 74 ಜನರು ಮಾದಕ ವಸ್ತು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳಲ್ಲಿ 74 ಗಂಜಾ ಪ್ರಕರಣಗಳನ್ನು ದಾಖಲು ಮಾಡ ಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಯುವಕರು ಗಂಜಾ ಸೇವನೆ ಮತ್ತು ಮಾದಕ ವಸ್ತುಗಳ ಸೇವನೆ ಮಾಡುತ್ತಿರುವುದು ಕಂಡು ಬಂದಲ್ಲಿ 112ಗೆ ಕರೆ ಮಾಡಿ ಹಾಗೂ ಪೊಲೀಸ್ ಇಲಾಖೆ ಅಧಿ ಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!