ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಮನೆ : ಮಳೆಗೆ ಅನಾಹುತ
1 min readಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ನಿರಂತರ ವರ್ಷಧಾರೆಗೆ ಮನೆಗಳು ಕುಸಿದು ಬೀಳುತ್ತಿವೆ. ಶಿಥಿಲಗೊಂಡಿದ್ದ ಮನೆ ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು ಮಳೆಯ ಅನಾಹುತಗಳ ಚಿತ್ರಣ ಬಿಂಬಿಸುವಂತಿದೆ.
ಅಬ್ಬಬ್ಬಾ.. ನೋಡು ನೋಡುತ್ತಲೇ ಕುಸಿದು ಬಿದ್ದ ಮನೆ ದೃಶ್ಯ ಮೊಬೈಲ್ ನಲ್ಲಿ ಸೆರೆ
ಸಿಕ್ಕಿದ್ದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟ ಸಮೀಪದ ಶಾಂತಿಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆ ಕುಸಿಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಶಿಥಿಲಗೊಂಡಿದ್ದ ಕಾರಣ ಮನೆಯಲ್ಲಿ ಯಾರೂ ವಾಸವಿರಲಿಲ್ಲ ಯಾರೂ ಇರದ ಕಾರಣ ತಪ್ಪಿದ ಭಾರೀ ಅನಾಹುತ ತಪ್ಪಿದಂತಾಗಿದೆ. ಮಲೆನಾಡಲ್ಲಿ ಮಳೆ ಆರ್ಭಟದ ಚಿತ್ರಣ ಈ ದೃಶ್ಯ ತೆರೆದಿಟ್ಟಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಸೇರಿದಂತೆ ಹಲವು ತಾಲೂಕುಗಳಲ್ಲಿ ಮಳೆ ಅಬ್ಬರಿಸುತ್ತಿದ್ದು ಹತ್ತು ಹಲವು ಅನಾಹುತಗಳನ್ನು ಉಂಟು ಮಾಡುತ್ತಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g