April 29, 2024

MALNAD TV

HEART OF COFFEE CITY

ಎರಡು ಬೈಕ್’ಗಳ ನಡುವೆ ಡಿಕ್ಕಿ; ಓರ್ವ ಸಾವು

1 min read

ಚಿಕ್ಕಮಗಳೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಜ್ಜಂಪುರ ತಾಲೂಕು ಸಂಕಲಾಪುರ ಅನ್ವರ್ ಕಾಲೋನಿ ಕ್ರಾಸ್ ಬಳಿ ನಡೆದಿದೆ. ಮಹದೇವಪ್ಪ (70) ಮೃತ ದುರ್ದೈವಿ. ಹೊಸದುರ್ಗದಿಂದ ಅಜ್ಜಂಪುರ ಮಾರ್ಗದಲ್ಲಿ ಬರುತ್ತಿದ್ದರು ಎಂದು ತಿಳಿದು ಬಂದಿದೆ, ಡಿಕ್ಕಿಯ ಪರಿಣಾಮ ವೇದಮೂರ್ತಿ ಎಂಬ ಇನ್ನೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಇವರು ಅಲ್ಲೇ ಹತ್ತಿರದ ಅವರ ತೋಟಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಸ್ಥಳೀಯರು ಗಾಯಗೊಂಡ ವೇದಮೂರ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಅಪಘಾತವು ನಡೆದು 2 ದಿನಗಳು ಕಳೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!