May 6, 2024

MALNAD TV

HEART OF COFFEE CITY

ಪೊಲೀಸ್ ಇಲಾಖೆ ಬಗ್ಗೆ ಅವಹೇಳನಕಾರಿ ಮಾತನಾಡಿದ ಗೃಹ ಸಚಿವರ ವಿರುದ್ಧ ದೂರು

1 min read

 

 

ಕೊಪ್ಪ: ತೀರ್ಥಹಳ್ಳಿ ಶಾಸಕ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು 

ಸಾರ್ವಜನಿಕವಾಗಿ‌ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಈ ಹೇಳಿಕೆಯಿಂದ ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಗೌರವವನ್ನು ಕಡಿಮೆ ಮಾಡುವುದರ ಜೊತೆಗೆ, ಜನರಲ್ಲಿ ಅಭದ್ರತೆಯನ್ನು ಸಹ ಮೂಡಿಸುತ್ತದೆ ಆದ್ದರಿಂದ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೊಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.

 

 

 

ಪೊಲೀಸ್ ಇಲಾಖೆಯಲ್ಲಿ ಸೇವೆ‌ ಸಲ್ಲಿಸುವವರು ತಳ ಸಮುದಾಯದಿಂದ ಬಂದವರು. ಮಹಿಳೆ, ಮಕ್ಕಳ ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಹಗಲು ರಾತ್ರಿ ಎನ್ನದೆ ನಗರ, ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಇಂತಹ ಅಧಿಕಾರಿ ವರ್ಗದವರನ್ನು ನಾಯಿಗೆ ಹೋಲಿಸಿರುವುದು ಸರಿಯಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ರೈತ ಸಂಘದ ಕಾರ್ಯಧ್ಯಕ್ಷ ನವೀನ್ ಕರುವಾನೆ ಅವರು ಕೊಪ್ಪ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ. ಈ ವೇಳೆಯಲ್ಲಿ ಬರ್ಕತ್ ಆಲಿ, ರಶೀದ್, ಇವನ್ ಜೋಯೆಲ್, ಸತೀಶ್ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!