ಮೈಕ್ರೋ ಫೈನಾನ್ಸ್ ಹಾವಳಿ ಖಂಡಿಸಿ. ರೈತರ ಪ್ರತಿಭಟನೆ
1 min read
ರಾಜ್ಯದಲ್ಲಿ ತಲೆದೂರಿರೋ ಮೈಕ್ರೋ ಫೈನಾನ್ಸ್ ಹಾವಳಿ ಖಂಡಿಸಿ ಕಾಫಿನಾಡಿನ ರೈತರು ಮೈಕ್ರೋ ಫೈನಾನ್ಸ್ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗಿದ್ದು, ಪೈನಾನ್ಸ್ಗಳಲ್ಲಿ ವ್ಯವಹಾರ ನಡೆಸಿದ್ದ ಬಡ ರೈತರು, ಸಾಮಾನ್ಯ ಜನರು ಸೇರಿದಂತೆ ಅನೇಕರು ಅವರ ಕಿರುಕುಳ ತಾಳಲಾಗದೆ ಹುಟ್ಟಿದ ಊರುಗಳನ್ನು ಬಿಟ್ಟು ಬೇರೆಡೆಗೆ ತಲುಪುವುದರ ಜೊತೆಗೆ ಕೆಲವರು ಅತ್ಮಹತ್ಯೆಗೆ ಶರಣಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಮೈಕ್ರೋಫೈನಾನ್ಸ್ಗಳ ಈ ದುರ್ವರ್ತನೆಗಳನ್ನು ಕಂಡಿಸಿ ಚಿಕ್ಕಮಗಳೂರಿನ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿ ನಗರದ ತಾಲೂಕು ಕಛೇರಿಯಿಂದ ಅಜಾದ್ ಪಾರ್ಕ್ ವೃತ್ತದವರೆಗೂ ಮೆರವಣಿಗೆ ನಡೆಸಿ, ಅಜಾದ್ ಪಾರ್ಕ್ ವೃತ್ತದಲ್ಲಿ ಬೃಹತ್ ಬಹಿರಂಗಸಭೆ ನಡೆಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘದ ನೂರಾರು ರೈತರು ರಸ್ತೆಗಳಿದು ಪ್ರತಿಭಟನೆ ನಡೆಸಿದ್ದು, ರೈತರಿಗೆ ನೀಡುವ ಸಾಲವನ್ನು ಕಡಿತ ಮಾಡಿರುವ ನರ್ಬಾಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಓಡಿಸಿ ರೈತರನ್ನು ಉಳಿಸಿ ಎನ್ನುವ ಘೋಷಣೆಯೊಂದಿಗೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g