April 29, 2024

MALNAD TV

HEART OF COFFEE CITY

ಮೊಟ್ಟೆ ದಾಳಿ ಖಂಡಿಸಿ ಪ್ರತಿಭಟನೆ

1 min read

 

ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು
ಚದುರಿಸಿದ ಘಟನೆ ಕಡೂರಿನಲ್ಲಿ ನಡೆದಿದೆ.

ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ತಡೆದ ಕಾರ್ಯಕರ್ತರನ್ನ ಪೊಲೀಸರು ತಳ್ಳಾಡಿ ನೂಕಾಡಿದರು,
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಹೊಡೆದಿರುವುದನ್ನ ಖಂಡಿಸಿ ಕಡೂರಿನಲ್ಲಿ ಮೆರವಣಿಗೆ ನಡೆಸಿ ಪಟ್ಟಣದ ಕೆಎಲ್ ವಿ ಸರ್ಕಲ್ ನಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು, ಕೆಎಲ್ ವಿ ಸರ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 206 ರನ್ನ ತಡೆದು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನ ಬಂಧಿಸದ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು,

ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನ ರಸ್ತೆಯಿಂದ ಬದಿಗೆ ಹೋಗಲು ಹೇಳಿದರು ಆದರೆ ಒಪ್ಪದ ಅವರನ್ನು ಚದುರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!