May 7, 2024

MALNAD TV

HEART OF COFFEE CITY

ಕಾಂಗ್ರೆಸ್ ಜನರೇಟರ್ ವಿವಾದವನ್ನು ಹುಟ್ಟುಹಾಕಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡುತ್ತಿದೆ

1 min read

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜನರೇಟರ್ ವಿವಾದವನ್ನು ಹುಟ್ಟುಹಾಕಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡುತ್ತಿದೆ. ಕಳೆದ ಆರು ವರ್ಷದಲ್ಲಿ ನಾನು ಪ್ರೀತಿ, ವಿಶ್ವಾಸದ ಆಧಾರದ ಮೇಲೆ ಕೆಲಸ ಮಾಡಿದ್ದೇನೆ ಯಾವುದೇ ಟ್ರಾನ್ಸ್ಪರ್ ಧಂದೆ ಮಾಡಿಲ್ಲ, ಯಾರ ಮೇಲೂ ದರ್ಪ ಮಾಡಿಲ್ಲ, ಭ್ರಷ್ಟಾಚಾರ ಮಾಡಿಲ್ಲ ಈ ರೀತಿ ಒಂದೇ ಒಂದು ಉದಾಹರಣೆ ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಕಾಂಗ್ರೆಸ್‌ಗೆ ಸವಾಲ್ ಹಾಕಿದ್ದಾರೆ.

ನಗರದ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಈ ಕುರಿತು ಮಾತನಾಡಿದ ಅವರು, ಮೂರು ವರ್ಷಗಳ ಕಾಲ ಇಲ್ಲದ ಜನರೇಟರ್ ವಿವಾದವನ್ನು ಈಗ ಕಾಂಗ್ರೆಸ್ ಹುಟ್ಟುಹಾಕಿದೆ. ಆರು ವರ್ಷಗಳ ಕಾಲ ಒಂದೇ ಒಂದು ಆರೋಪವನ್ನು ಮಾಡದೇ ಇದ್ದು ಈಗ ಈ ರೀತಿ ಆರೋಪ ಮಾಡುತ್ತಿರುವುದು ಸರಿಯಲ್ಲ. ರಾಜಕಾರಣಕ್ಕೊಸ್ಕರ ಎಲ್ಲವನ್ನು ಮರೆತು ಏನು ಬೇಕಾದರೂ ಮಾಡುವ ಪರಿಸ್ಥಿಗೆ ಕಾಂಗ್ರೆಸ್ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಹಾಗೂ ಕಾಂಗ್ರೆಸ್ ಮುಖಂಡ ಸಂದೀಪ್ ಜನರೇಟರ್ ವಿಚಾರದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪ ಮಾಡಿದ್ದು ಜಗತ್ತಿನಲ್ಲಿಯೇ ನಂಬರ್ ಓನ್ ಕಂಪನಿಯಾದ ಕಿರ್ಲೋಸ್ಕರ್ ಕಂಪನಿಯ ಜನರೇಟರ್‌ಗಳನ್ನು ನೀಡಿದ್ದೇನೆ. ಸರ್ಕಾರದ ಅಂಗ ಸಂಸ್ಥೆಯಾದ ಕೆಆರ್‌ಐಡಿಎಲ್ ಸಂಸ್ಥೆಯ ಮೂಲಕ ನೀಡಲಾಗಿದ್ದು, ಕಾಂಗ್ರೆಸ್‌ಗೆ ಮಾಹಿತಿ ಹಕ್ಕಿನ ಮೂಲಕ ಈ ಬಗ್ಗೆ ಎಲ್ಲಾ ಮಾಹಿತಿತಯನ್ನು ಪಡೆದುಕೊಳ್ಳಲಿ. ಈ ವರೆಗೆ ನಾನು ಕೊಟ್ಟಿರುವ ಜನರೇಟರ್‌ಗಳು ಒಂದು ಕಡೆ ಸಮಸ್ಯೆಯಾಗಿದ್ದರೆ ಸಾರ್ವಜನಿಕವಾಗಿ ತಿಳಿಸಲಿ ಎಂದು ಸವಾಲಾಕಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕ ಬಂದ ಬಳಿಕ ಗ್ರಾ.ಪಂ ಸದಸ್ಯರಿಗೆ ಗೌರವಧನ ನೀಡಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ ಇದು ಚುನಾವಣೆಯ ಗಿಮಿಕ್ ಅಲ್ಲ ಈ ವಿಷಯದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದರು. ೫೦ ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಗ್ರಾ.ಪಂ ಸದಸ್ಯರ ಬಗ್ಗೆ ಕಾಳಜಿ ಇಲ್ಲ. ನೀವು ಅಧಿಕಾರದಲ್ಲಿದ್ದಾಗ ಗ್ರಾಮ ಪಂಚಾಯಿತಿಗಳಗೆ ನಿಮ್ಮ ಕೊಡುಗೆ ಏನು ಎಂಬುದನ್ನು ಮನನ ಮಾಡಿಕೊಳ್ಳಬೇಕು ಎಂದು ಪ್ರಶ್ನಿಸಿದರು.

ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ರಾಜ್ಯದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಬಹುಮತ ಸಾಭೀತು ಮಾಡುವ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಗೆ ಬಿಜೆಪಿ ಕೊಡುಗೆ ಏನೆಂದು ಪ್ರಶ್ನಿಸುವ ಕಾಂಗ್ರೆಸ್ ನಾಯಕರು ಇಂದಿರಾಗಾoಧಿ ಸ್ಪರ್ಧೆ ಮಾಡಿದ್ದ ಕ್ಷೇತ್ರದಲ್ಲಿ ಕೇಂದ್ರಿಯ ವಿದ್ಯಾಲಯ ಯಾರ ಕಾಲದಲ್ಲಿ ಬಂತು ಹಾಗೂ ಮೆಡಿಕಲ್ ಕಾಲೇಜು ಮಂಜೂರಾತಿ ಯಾವ ಕಾಲದಲ್ಲಿ ಆಗಿದೆ ಎಂಬುದನ್ನು ಹಿಂದೆ ತಿರುಗಿ ನೋಡಿ ಮಾತನಾಡಬೇಕು ಎಂದು ಕಾಂಗ್ರೆಸ್ ಅನ್ನು ಟೀಕಿಸಿದರು.

ಈ ಹಿಂದೆ ವಿಧಾನಪರಿಷತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಗಾಯತ್ರಿ ಶಾಂತೇಗೌಡ ಹೇಗೆ ನಡೆದುಕೊಂಡಿದ್ದರು ಎಂಬುದು ಎಲ್ಲರಿಗೆ ಗೊತ್ತಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸಭೆಗಳಲ್ಲಿ ಅವರ ವರ್ತನೆ ನೋಡಿ ಬೇಸರವಾಗುತ್ತಿತ್ತು. ತಮ್ಮ ಕೆಲಸವಾಗದಿದ್ದಾಗ ಅಧಿಕಾರಿಗಳ ಜೊತೆಗೆ ಹೇಗೆ ನಡೆದುಕೊಂಡಿದ್ದಾರೆ ಎಂಬುದು ತಿಳಿದಿದೆ. ಇಂತಹವರು ಜನರೇಟರ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಮೂರು ತಿಂಗಳ ಹಿಂದೆ ರಸ್ತೆಗೆ ಹಾಕಿದ್ದ ಡಾಂಬರ್ ಇವತ್ತು ಕೊಚ್ಚಿಹೋಗಿದೆ ಇಂತಹವರು ಪ್ರಾಣೇಶ್ ಬಗ್ಗೆ ಮಾತನಾಡುತ್ತಿರುವುದು ಆಶ್ಚರ್ಯ ಉಂಟುಮಾಡಿದೆ ಎಂದು ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ವಿರುದ್ಧವೂ ಹರಿಹಾಯ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!