May 18, 2024

MALNAD TV

HEART OF COFFEE CITY

ಕನ್ನಯ್ಯ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

1 min read

ಚಿಕ್ಕಮಗಳೂರು: ಪಂಜಾಬ್‍ನ ಉದಯಪುರದಲ್ಲಿ ಟೈಲರ್ ಕನ್ಹಯ್ಯಲಾಲ್ ಹತ್ಯೆ ಮಾಡಿದ ವರನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟಿಸಿದ ಮುಖಂಡರುಗಳು ಕೊಲೆಗಾರ ರು ಯಾರೇ ಆಗಿರಲಿ ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ, ಅಭಿವೃದ್ಧಿ ಕುರಿತು ಮಾತನಾಡದ ಬಿಜೆಪಿ ಮುಖಂಡರು ಪಕ್ಷದ ವರ್ಚಸ್ಸು ಕುಂದುತ್ತಿರುವುದನ್ನು ಗಮನಿಸಿ, ಜಾತಿಗಳ ನಡುವೆ ವಿಷಬೀಜ ಬಿತ್ತಲು ಮುಂದಾಗಿದ್ದಾರೆಂದು ಆರೋಪಿಸಿದರು.

ಕೊಲೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ಮುಖಂಡರು ಅಪಪ್ರಚಾರ ನಡೆಸಲು ಮುಂದಾಗಿದ್ದಾರೆ. ಈ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಈ ಘಟನೆ ಗೆ ನೂಪುರ ಶರ್ಮ ಕಾರಣವಾಗಿದ್ದು, ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಕಾಂಗ್ರೆಸ್ ಮಹಿಳಾ ವಿಭಾಗದ ರಾಜ್ಯ ಉಪಾಧ್ಯಕ್ಷೆ ರೇಖಾಹುಲಿ ಯಪ್ಪಗೌಡ, ಜಿಲ್ಲಾಪಂಚಾಯತ್ ಮಾಜಿ ಅಧ್ಯಕ್ಷ ಕೆ.ಮಹಮ್ಮದ್, ಮುಖಂಡ ಬಿ.ಎಚ್.ಹರೀಶ್, ಅಲ್ಪ ಸಂಖ್ಯಾತರ ವಿಭಾಗದ ಮುಖಂಡ ನಯಾಜ್ ಅಹ್ಮದ್ ಸೇರಿದಂತೆ ಅನೇಕರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!