May 15, 2024

MALNAD TV

HEART OF COFFEE CITY

ಗ್ರಾಹಕರ ದಿನಾಚರಣೆ : ವಕೀಲರ ಸಂಘದ ಅಧ್ಯಕ್ಷ ಥಾಮಸ್ ಉದ್ಘಾಟನೆ

1 min read

ಚಿಕ್ಕಮಗಳೂರು : ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಇಲಾಖೆ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾನೂನು ಮಾಪನಾಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಯಿತು. ವಾರ್ತಾ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಥಾಮಸ್ ಉದ್ಘಾಟನೆ ಮಾಡಿದರು. ಮನುಷ್ಯ ಅಸ್ಥಿತ್ವದಲ್ಲಿರುವಷ್ಟು ಕಾಲ ಮೋಸ ಮಾಡುವವವರು ಇರುತ್ತಾರೆ ಹಾಗೂ ಅವರಿಂದ ಮೋಸ ಹೋಗುವವರು ಸಹ ಇರುತ್ತಾರೆ ಎಂದು ತಿಳಿಸಿದರು. ಗ್ರಾಹಕರು ಯಾವುದೇ ವಸ್ತುಗಳನ್ನು ಕೊಳ್ಳುವಾಗ ಅವರೊಂದಿಗೆ ಗ್ರಾಹಕ ಕಾನೂನು ಇದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ರು. ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬಾರಾಜು ಮತ್ತು ಗ್ರಾಹಕರ ವ್ಯವಾಹಾರ ಇಲಾಖೆಯ ಉಪನಿರೀಕ್ಷಕ ಬಿ.ಆರ್. ಕೃಷ್ಣಮೂರ್ತಿ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಪ್ರಸನ್ನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ. ಮಂಜೇಗೌಡ ಮುಂತಾದವರಿದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!