May 4, 2024

MALNAD TV

HEART OF COFFEE CITY

ಕಾಫಿನಾಡಲ್ಲಿ ಮುಂದುವರೆದ ಹುಲಿ ಉಗುರಿನ ಬೇಟೆ; ಇಬ್ಬರು ಅರ್ಚಕರ ಬಂಧನ

1 min read

ಚಿಕ್ಕಮಗಳೂರು : ಕಾಫಿನಾಡಲ್ಲಿ ಹುಲಿ ಉಗುರು ಕಾರ್ಯಾಚರಣೆ ಮುಂದುವರೆದಿದ್ದು ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯದಲ್ಲಿ ನಡೆದಿದೆ.

ಬಿಗ್​ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಸ್ಯಾಂಡಲ್​ವುಡ್​ನ ಸ್ಟಾರ್ಸ್ ಗಳಾದ ಚಾಲೆಂಜಿಂಗ್​ ಸ್ಟಾರ್ ದರ್ಶನ್​, ರಾಕ್​ಲೈನ್​ ವೆಂಕಟೇಶ್, ನವರಸ ನಾಯಕ ಜಗ್ಗೇಶ್​ ಹಾಗೂ ನಿಖಿಲ್​ ಕುಮಾರಸ್ವಾಮಿ ಇವರಿಗೂ ಸದ್ಯ ಈ ಬಿಸಿ ಮುಟ್ಟಿದೆ. ಅದರಂತೆ ಕಾಫಿನಾಡಿನಲ್ಲೂ ಕಳೆದ ಒಂದು ವಾರದ ಹಿಂದೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಇದೀಗ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನ ಬಂಧಿಸಿರುವ ಅಧಿಕಾರಿಗಳು ಹುಲಿ ಉಗುರಿನ ಬೇಟೆ ಮುಂದುವರೆಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ್ ರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದು, ಬಂಧಿತರಿಂದ ಮೂರು ಹುಲಿ ಉಗುರು ವಶಕ್ಕೆ ಪಡೆದಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಇಬ್ಬರನ್ನ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!