ಮುಂದುವರೆದ ಧಾರಾಕಾರ ಮಳೆ : ನಾಳೆಯೂ ರಜೆ ಘೋಷಣೆ
1 min read
ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರೆದ ಹಿನ್ನೆಲೆಯಲ್ಲಿ ನಾಳೆಯೂ ಕೂಡಾ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಲೆನಾಡು ಭಾಗದ 6 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮ ವಾಗಿ ನಾಳೆ ಒಂದು ದಿನ ಮಾತ್ರ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜುಲೈ 27 ಶನಿವಾರ ಒಂದು ದಿನಕ್ಕೆ ಮಾತ್ರ ರಜೆ ಘೋಷಣೆ ಮಾಡಿದ್ದು
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕುಗಳ ಎಲ್ಲಾ ಅಂಗನವಾಡಿ ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಡೂರು ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎಸ್ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g