May 16, 2024

MALNAD TV

HEART OF COFFEE CITY

ರಾಜೇಂದ್ರ ಕುಮಾರ್ ಕಟಾರಿಯಾ ಅವರೊಂದಿಗೆ ಸಂವಾದ ಕಾರ್ಯಕ್ರಮ

1 min read

ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪ್ರೆಸ್ ಕ್ಲಬ್ ಪ್ರತಿ ತಿಂಗಳಿಗೊಮ್ಮೆ ತಿಂಗಳ ಅತಿಥಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಂದು ಮೊದಲ ಬಾರಿಗೆ ಕಟಾರಿಯಾ ಅವರೊಂದಿಗೆ ಪತ್ರಕರ್ತರ ಸಂವಾದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ದ ಉದ್ಘಾಟನೆಯನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ನಡೆಸಿಕೊಟ್ಟರು. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜಿ.ಪಂ ಸಿಈಓ ಗೋಪಾಲಕೃಷ್ಣ, ಉಪವಿಭಾಗಾಧಿಕಾರಿ ರಾಜೇಶ್ ತಹಶಿಲ್ದಾರ್ ಸುಮಂತ್ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ಹಾಗೂ ಪ್ರೆಸ್ ಕ್ಲಬ್ ನ ಕಾರ್ಯಕಾರಿ ಸಮಿತಿ ಸದಸ್ಯರು, ಹಾಗೂ ಪ್ರೆಸ್ ಕ್ಲಬ್ ಸದಸ್ಯರು ಪಾಲ್ಗೊಂಡಿದ್ದರು. ಸಂವಾದದಲ್ಲಿ ಕಟಾರಿಯಾ ಅವರಿಗೆ ಪತ್ರಕರ್ತರು ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನ ಮಾಡಿದರು. ಕಡೂರು ,,ಮೂಡಿಗೆರೆ ಭೂಕಬಳಿಕೆ ಕೇಸ್ ನ ವರದಿ ತಮಗೆ ತಲುಪಿದ್ದು ಶೀಘ್ರವೇ ತಪ್ಪಿತಸ್ಥರ ಮೇಲೆ ಕ್ರಮ ಖಚಿತ ಎಂದ ಅವರು ಆನೆ ಹಾವಳಿ ಒತ್ತುವರಿ ಭೂಮಿ ಗುತ್ತಿಗೆ ನೀಡುವ ವಿಚಾರ, ಪ್ರವಾಸೋದ್ಯಮ ಅಭಿವೃದ್ಧಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆದಿದೆ ಎಂದು ಕಟಾರಿಯಾ ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!