May 9, 2024

MALNAD TV

HEART OF COFFEE CITY

ಜಿಲ್ಲೆಯಲ್ಲಿ 196 ಜನರಿಗೆ ಕೊರೊನಾ ಸೋಂಕು‌ ದೃಢ

1 min read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ದ್ವಿಶತಕದತ್ತ ಮುಖ ಮಾಡಿದ್ದು, ಶನಿವಾರ 196ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 19ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಲ್ಲಾದ್ಯಂತ ಬಾರೀ ಪ್ರಮಾಣದ ಸೋಂಕಿತರು ಪತ್ತೆಯಾಗುತ್ತಿದ್ದು, ಶುಕ್ರವಾರ 174 ಜನರಲ್ಲಿ ಸೋಂಕು ಪತ್ತೆಯಾಗಿದ್ದರೇ, ಶನಿವಾರ 196 ಜನರಲ್ಲಿ ಸೋಂಕು ಪತ್ತೆಯಾಗಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕವನ್ನು ಸೃಷ್ಠಿಸಿದೆ.

ಚಿಕ್ಕಮಗಳೂರು ತಾಲ್ಲೂಕಿನ 116 ಜನರಲ್ಲಿ ಸೋಂಕು ಕಂಡು ಬಂದಿದ್ದು, ಕಡೂರು 19, ತರೀಕೆರೆ 31, ಮೂಡಿಗೆರೆ 8, ನರಸಿಂಹರಾಜಪುರ 3, ಕೊಪ್ಪ 18 ಹಾಗೂ ಶೃಗೇರಿಯ ಓರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.

ಇಂದು ಪತ್ತೆಯಾದ ಸೋಂಕಿತರಲ್ಲಿ 189 ಜನರನ್ನು ಹೋಮ್ ಐಸೋಲೇಶನ್‍ಗೆ ಒಳಪಡಿಸಲಾಗಿದೆ. 7 ಜನರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಸೋಂಕಿನಿಂದ ಶನಿವಾರ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಆರೋಗ್ಯ ಇಲಾಖೆ ದ್ರಢಪಡಿಸಿದ್ದು, ಜಿಲ್ಲೆಯಲ್ಲಿ ಇಲ್ಲಿವರೆಗೂ 52,254 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 51,117 ಜನರು ಗುಣಮುಖರಾಗಿದ್ದಾರೆ. 719 ಸಕ್ರೀಯ ಪ್ರಕರಣಗಳಿದ್ದು, ಇದುವರೆಗೂ ಚಿಕಿತ್ಸೆ ಫಲಕಾರಿಯಾಗದೆ 397 ಜನರು ಮೃತಪಟ್ಟಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!