May 2, 2024

MALNAD TV

HEART OF COFFEE CITY

ಲೋಪದೋಷ ಸರಿಪಡಿಸಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ_ಸಿ.ಟಿ ರವಿ

1 min read

ಚಿಕ್ಕಮಗಳೂರು: ನಗರಸಭೆ ಚುನಾವಣೆಯಲ್ಲಿ ಸಮಚಿತ್ತದ ಫಲಿತಾಂಶ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ನಗರಸಭೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಪಾರದರ್ಶಕ ಆಡಳಿತ ತರಲು ಯತ್ನಿಸಲಾಗುವುದು ಎಂದು ಶಾಸಕ ಸಿ.ಟಿ ರವಿ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ನಗರದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ, ಯುಜಿಡಿ. ಅಮೃತ್ ಯೋಜನೆ, ಮೆಡಿಕಲ್ ಕಾಲೇಜು ನಿರ್ಮಾಣ, ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ, ಬಿಜೆಪಿಯ ಮೇಲೆ ನಂಬಿಕೆ ವಿಶ್ವಾಸವಿಟ್ಟು ಸತತ ಮೂರನೇ ಬಾರಿಗೆ ನಿಚ್ಚಳ ಬಹುಮತ ನೀಡಿರುವುದು ಸ್ವಾಗತಾರ್ಹ. ಅಭಿವೃದ್ಧಿ ಮಾಡದವರು ಅಭಿವೃದ್ಧಿ ವಿರುದ್ದವಾಗಿ ಅಪಪ್ರಚಾರ ಮಾಡುತ್ತಾರೆ ಎಂದು ದೂರಿದರು.
ನಗರದ 35 ವಾರ್ಡ್‍ಗಳು ಕೂಡ ನಮ್ಮದೇ, ಆ ನಿಟ್ಟಿನಲ್ಲಿ ಯಾವುದೇ ತಾರತಮ್ಯ ಮಾಡದೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು, ಅಭಿವೃದ್ಧಿಪರವಾದ ಆಲೋಚನೆ ನಿಟ್ಟಿನಲ್ಲಿ ಸಲಹಾ ಸಮಿತಿ ರಚಿಸಿ ವಿಷನ್ ಚಿಕ್ಕಮಗಳೂರು ಮಾದರಿಯಲ್ಲಿ ರೂಪುರೇಷೆಗಳನ್ನು ಸಿದ್ದಪಡಿಸಲು ಸದಸ್ಯರಿಗೆ ಸಲಹೆ ನೀಡಲಾಗುವುದು, ಈ ಗೆಲುವು ನಗರದ ಜನತೆ ಬಿಜೆಪಿ ಮೇಲಿನ ನಂಬಿಕೆಯನ್ನು ಮುಂದುವರಿಸಿರುವುದಕ್ಕೆ ಸಾಕ್ಷಿ ಎಂದರು.

ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಆದರೆ ಅತಿಯಾದ ಆತ್ಮವಿಶ್ವಾಸ, ಪೈಪೋಟಿ, ಭಿನ್ನಮತದ ಕಾರಣ, ಫಲಿತಾಂಶದಲ್ಲಿ ವ್ಯತಿರಿಕ್ತವಾಗಿದೆ. ಇದೀಗ 18 ಸ್ಥಾನಗಳಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಸಮಚಿತ್ತದಲ್ಲಿ ಫಲಿತಾಂಶ ಬಂದಿರುವುದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ನಗರಸಭೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಪಾರದರ್ಶಕ ಆಡಳಿತ ನೀಡುವ ಮೂಲಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಮೀಸಲಾತಿ ಪಟ್ಟಿಗೆ ಸಂಬಂಧಿಸಿದಂತೆ ನ್ಯಾಯಾಲದ ತೀರ್ಪಿನ ಬಳಿಕ ಚುನಾವಣಾ ಆಯೋಗ ತರಾತುರಿಯಲ್ಲಿ ಚುನಾವಣೆ ಘೋಷಣೆ ಮಾಡಿದ ಪರಿಣಾಮÀ ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆಯಾಗದ ಕಾರಣ ಫಲಿತಾಂಶ ಮೂರು ಪಕ್ಷಗಳ ಮೇಲೆ ಪರಿಣಾಮ ಬೀರಿದೆ. ಪ್ರಜಾಪ್ರಭುತ್ವ ಯಶಸ್ಸಿಗೆ ಜನರ ಸಹಭಾಗಿತ್ವ ಅಗತ್ಯ, ಅನೇಕ ವಾರ್ಡ್‍ಗಳಲ್ಲಿ ಮತದಾರ ಪಟ್ಟಿಯಲ್ಲಿ ಮತದಾರರ ಹೆಸರುಗಳಿದ್ದರು ಕೆಲವರು ಮತದಾನದ ಮಾಡದೇ ಉದಾಸೀನ ತೋರಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಬೂತ್ ಮಟ್ಟದ ಅಧಿಕಾರಿಗಳನ್ನು ಒಗ್ಗೂಡಿಸಿ ಅರ್ಹ ಮತದಾರರನ್ನು ಮತಪಟ್ಟಿಗೆ ಸೇರಿಸುವ, ಕಾರ್ಯವನ್ನು ಆಂದೋಲನ ರೀತಿಯಲ್ಲಿ ಕೈಗೊಳ್ಳಬೇಕಿದೆ. ಲೋಪದೋಷಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಚುನಾವಣೆಯಲ್ಲಿ ಸುಧಾರಣೆ ತಂದು, ಅಕ್ರಮ ಮತದಾನ, ಲೋಪದೋಷಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತಕಾರ್ಡ್‍ಗಳಿಗೆ ಆಧಾರ್ ಜೋಡಿಸುವ ಕಾರ್ಯಕ್ಕೆ ಮುಂದಾಗಿದೆ ಮುಂದಿನ ದಿನಗಳಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!