May 16, 2024

MALNAD TV

HEART OF COFFEE CITY

ಕಾಡಾನೆ ದಾಳಿಗೆ ಲಕ್ಷಾಂತರ ಮೌಲ್ಯದ ಬೆಳೆ ನಾಶ

1 min read

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಕಣತಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ. ಅದರಲ್ಲಿಯೂ ಚಿಕ್ಕಮಗಳೂರುನಿಂದ ಶೃಂಗೇರಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದ ಸುತ್ತಮುತ್ತ ಕಳೆದೊಂದು ತಿಂಗಳಿನಿಂದ 7 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ನಿರಂತರವಾಗಿ ಕಾಫಿತೋಟ, ಭತ್ತದ ಗದ್ದೆ ಗಳ ಮೇಲೆ ದಾಂಧಲೆ ಮಾಡುತ್ತಿವೆ. ಲಕ್ಷಾಂತರ ಮೌಲ್ಯದ ಬೆಳೆ ನಾಶ ಮಾಡಿದ್ದು, ಕಾಡಾನೆಗಳ ಸಂಚಾರದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಅರೇನೂರು, ಕಣತಿ, ಬೆಟ್ಟದಮರಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಕಾಟ ಹೆಚ್ಚಾಗಿದ್ದು, ಕಾಡಾನೆಗಳ ಹಿಂಡನ್ನ ಕಾಡಿಗೆ ಓಡಿಸುವಂತೆ ಗ್ರಾಮಸ್ಥರು ಅರಣ್ಯಇಲಾಖೆಗೆ ಪಟ್ಟು ಹಿಡಿದಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!