May 2, 2024

MALNAD TV

HEART OF COFFEE CITY

ಡಿ.ಸಿ ಕಚೇರಿಗೆ ನುಗ್ಗಿ ಪ್ರತಿಭಟನೆ: ಐವರ ಮೇಲೆ ಎಫ್ಐಆರ್ ದಾಖಲು

1 min read

ಚಿಕ್ಕಮಗಳೂರು: ದತ್ತಪೀಠದಲ್ಲಿ ಹೋಮಕ್ಕೆ ಅವಕಾಶ ನೀಡದಿದ್ದಕ್ಕೆ ಡಿ.ಸಿ ಕಚೇರಿ ಬಳಿ ಹೋಮ ಮಾಡಿ ಪ್ರತಿಭಟನೆ ವೇಳೆ ಅತಿಕ್ರಮ ಪ್ರವೇಶ ಮಾಡಿದ ಸಂಘ ಪರಿವಾರ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಾಗಿದೆ.

ನಿನ್ನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನಾ ಹೈಡ್ರಾಮ ವೇಳೆ ಡಿ.ಸಿ ಕಚೇರಿಗೆ ನುಗ್ಗಿ ಬಂದ ಐವರು ಸಂಘ ಪರಿವಾರ ಕಾರ್ಯಕರ್ತರ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಲಂ 341 ರ ಪ್ರಕಾರ ಅಕ್ರಮ ಕೂಟ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪ ಐವರ ಮೇಲೆ ಹೊರಿಸಲಾಗಿದೆ. ಅಲ್ಲದೇ ಕಲಂ 353 ಪ್ರಕಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ ಕೂಡ ಸಂಘ ಪರಿವಾರ ಕಾರ್ಯಕರ್ತರ ಮೇಲೆ ಹಾಕಲಾಗಿದೆ. ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಭಜರಂಗದಳ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರ ಹೆಸರು ನಮೂದಿಸದೇ ಐವರು ಅಪರಿಚಿತರು ಕಚೇರಿಗೆ ನುಗ್ಗಿ ಅಹಿತಕರ ವಾತಾವರಣ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಸಂಪೂರ್ಣ ವಿಡಿಯೋ ಪರಿಶೀಲಿಸಿ ನಂತರ ಆರೋಪಿಗಳ ಹೆಸರು ಕೊಡುವುದಾಗಿ ಪೊಲೀಸರಿಗೆ ಜಿಲ್ಲಾಡಳಿತ ಹೇಳಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!