May 5, 2024

MALNAD TV

HEART OF COFFEE CITY

ದತ್ತಭಕ್ತಿ, ಹಿಂದೂ ಶಕ್ತಿಯನ್ನು ಪ್ರದರ್ಶಿಸಿದ್ದಕ್ಕೆ ಧನ್ಯವಾದ: ಸಿ.ಟಿ ರವಿ

1 min read

ಚಿಕ್ಕಮಗಳೂರು: ಈ ವರ್ಷ ಕೂಡ ದತ್ತಜಯಂತಿ ಹಿನ್ನಲೆ ಶೋಭಾಯಾತ್ರೆಯು ವಿಜ್ರುಭಣೆಯಿಂದ ಸಾಗಿದ್ದು, ಹಿಂದೂ ಭಾಂದವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ದತ್ತಭಕ್ತಿಯನ್ನು, ಹಿಂದೂ ಶಕ್ತಿಯನ್ನು ಪ್ರದರ್ಶಿಸಿದ್ದಕ್ಕೆ ಧನ್ಯವಾದಗಳು ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದರು.
ದತ್ತ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಬೃಹತ್ ಶೋಭಾಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ದತ್ತಾತ್ರೇಯ ಪೀಠದಲ್ಲಿ ನಾಳೆ ದತ್ತಪಾದುಕೆ ದರ್ಶನ ಪಡೆದು, ದತ್ತ ಹೋಮದಲ್ಲಿ ಭಾಗಿಯಾಗಿ, ಪ್ರಸಾದವನ್ನು ಸ್ವೀಕರಿಸಬೇಕು ಎಂದು ಎಲ್ಲ ಭಕ್ತರಿಗೆ ಮನವಿ ಮಾಡಿದರು.

ಚಂದ್ರದ್ರೋಣ ಪರ್ವತದಲ್ಲಿರುವ ವಿವಾದಿತ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್​ ಶೋಭಾಯಾತ್ರೆ ನಡೆಯಿತು. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿತ್ತು. ಶ್ರೀರಾಮಸೇನೆ, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್​ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಿತು.

ಮಧ್ಯಾಹ್ನ 2 ಗಂಟೆಗೆ ಶೋಭಾಯಾತ್ರೆ ಪ್ರಾರಂಭಿಸಲಾಯಿತು. ನಗರದ ಕಾಮಧೇನು ಗಣಪತಿ ದೇವಾಲಯದಿಂದ ಆಜಾದ್ ವೃತದ ವರೆಗೂ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು, ಶೋಭಾಯಾತ್ರೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ನಾಯಕ ಸಿಟಿ ರವಿ, ಸುನಿಲ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ ಶೋಭಾ, ಉಡುಪಿಯ ಪ್ರಮೋದ್ ಮಧ್ವರಾಜ್ ಯಾತ್ರೆಯಲ್ಲಿ ಭಾಗಿಯಾಗಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!