May 5, 2024

MALNAD TV

HEART OF COFFEE CITY

22 ವರ್ಷದ ಬಳಿಕ ಅಮ್ಮನ ಮಡಿಲು ಸೇರಿದ ಮಗಳು ಹೃದಯ ಸ್ಪರ್ಶಿ ಘಟನೆಗೆ ಸಾಕ್ಷಿಯಾಯ್ತು ಮುದ್ರೆಮನೆ ಏಸ್ಟೇಟ್

1 min read

ಮೂಡಿಗೆರೆ: ತನ್ನ 9ನೇ ವಯಸ್ಸಿನಲ್ಲಿ ನಾಪತ್ತೆಯಾಗಿದ್ದ ಮಗಳು 22 ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮನಕಲಕುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಅಂಜಲಿ 9ನೇ ವಯಸ್ಸಲ್ಲಿ ನಾಪತ್ತೆಯಾಗಿದ್ದರು. ಆದರೆ ತಂದೆ- ತಾಯಿ ಮಗಳು ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರಲಿಲ್ಲ ಎಂದು ತಿಳಿದುಬಂದಿದೆ. ಅಂಜಲಿ ಕೇರಳದಲ್ಲಿ ಮನೆ ಕೆಲಸ ಮಾಡಿಕೊಂಡು ಅಲ್ಲಿಯೇ ಜೀವನ ನಿರ್ವಹಣೆ ಮಾಡುತ್ತಿದ್ದರು.

 

ಬಳಿಕ ಕೇರಳದ ನೆಲ್ಲಮಣಿಯ ಸಾಜಿ ಎಂಬವರೊಂದಿಗೆ ವಿವಾಹವಾಗಿದ್ದರು. ಕಳೆದ 3 ವರ್ಷದಿಂದ ಮಗಳು ಅಂಜಲಿ ಎಲ್ಲಾಕಡೆ ತಾಯಿಗಾಗಿ ಹುಡುಕಾಡಿದ್ದಾರೆ. ಕೊನೆಗೂ ಮೂಡಿಗೆರೆಯ ಮುದ್ರೆಮನೆಯಲ್ಲಿ ತಾಯಿ ಪತ್ತೆಯಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಅಂಜಲಿ ತಂದೆ ಮೃತಪಟ್ಟಿದ್ದು, ಆಕೆಯ ತಾಯಿ ಮಾಹಿತಿ ನೀಡಿದ್ದಾರೆ. ತಾಯಿ ಕಣ್ಣಿಗೆ ಬೀಳುತ್ತಿದ್ದಂತೆ ಅಂಜಲಿ ಓಡಿ ಹೋಗಿ ಅಪ್ಪಿಕೊಂಡಿದ್ದಾರೆ. ಹೆತ್ತವ್ವನನ್ನು ಕಂಡ ಖುಷಿಯಲ್ಲಿ ಮಗಳು ಮತ್ತು ಕಾಣೆಯಾಗಿದ್ದ ಮಗಳನ್ನ ಕಂಡ ತಾಯಿ ಒಬ್ಬರನ್ನೊಬ್ಬರು ಗಟ್ಟಿಯಾಗಿ ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!