April 29, 2024

MALNAD TV

HEART OF COFFEE CITY

ತಿಮ್ಮಲಾಪುರದಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಆಗ್ರಹ

1 min read

ಚಿಕ್ಕಮಗಳೂರು : ಸೋಲಾರ್ ಪ್ಲಾಂಟೇಷನ್ ಹಾಕಿರುವ ಬೆಂಗಳೂರಿನ ಖಾಸಗಿ ಕಂಪನಿಯವರ ಹಣ ಉಳಿಸುವ ಯೋಚನೆಯಿಂದ ತಿಮ್ಮಲಾ ಪುರ ಗ್ರಾಮದ ಸಮಗ್ರ ಅಭಿವೃದ್ಧಿಗೆ ಮಾರಕವಾಗುತ್ತಿದೆ ಎಂದು ತಿಮ್ಮಲಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಆರೋಪಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದ ನಂತರ ಈ ಬಗ್ಗೆ ಮಾಹಿತಿ ನೀಡಿದ ಅವರು ಅರಸೀಕೆರೆಯ ಕಣಗತ್ತಿ ಗ್ರಾಮದಲ್ಲಿ ಬೆಂಗಳೂರಿನ ಖಾಸಗಿ ಕಂಪನಿಯವರು ಸೋಲಾರ್ ಪ್ಲಾಂಟೇಶನ್ ಹಾಕಿದ್ದು, ಅಲ್ಲಿಂದ ಕಡೂರಿನ ಪಂಚನಹಳ್ಳಿ ವಿದ್ಯುತ್ ಪ್ರಸರಣ ಘಟಕಕ್ಕೆ ವಿದ್ಯುತ್ ನೀಡಲು ಅಭಿವೃದ್ಧಿ ಶೀಲ ತಿಮ್ಮಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ವಿದ್ಯುತ್ ಕಂಬಗಳನ್ನು ಎಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಕ್ಕೆ ಬೇಕಾಗುವ ಬಾಗವು ಇಲ್ಲದಂತಾಗಿ ತಿಮ್ಮಲಾಪರವನ್ನು ಹಾಗು ಅಲ್ಲಿನ ರೈತ ಕುಟುಂಬವನ್ನು ಬೀದಿಗೆ ಬೀಳಲಿದ್ದಾರೆ. ಪ್ರಸ್ತಾವಿತ ಜಾಗದಿಂದ 300 ಮೀಟರ್ ದೂರದಲ್ಲಿ ವಿದ್ಯುತ್ ಕಂಬಗಳನ್ನು ಹಾಕಿದರೆ ಎಲ್ಲರಿಗೂ ಒಳಿತು ಎಂದು ಹೇಳಿದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಆರ್. ದುಗ್ಗಪ್ಪಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಭ್ ರಾಜ್, ಹಸಿರು ಸೇನೆ ಜಿಲ್ಲಾಧ್ಯಕ್ಷ ಅನಂತೇಶ್, ಜಿಲ್ಲಾ ಸಂಚಾಲಕ ಸವಿಂಜಯ ಜೈನ್, ಜಿಲ್ಲಾ ಉಪಾಧ್ಯಕ್ಷರುಗಳಾದ ಮಂಜೇಗೌಡ, ಪಿ.ಕೆ. ನಾಗೇಶ್, ಚಿಕ್ಕಮಗಳೂರು ತಾಲೂಕು ಅದ್ಯಕ್ಷ ತುಳಸೇಗೌಡ, ಮೂಡಿಗೆರೆ ತಾಲೂಕು ಅಧ್ಯಕ್ಷ ವಸಂತ ಹೆಗ್ಡೆ, ತರೀಕೆರೆ ತಾಲೂಕು ಅಧ್ಯಕ್ಷ ಓಂಕಾರಪ್ಪ, ಕಡೂರು ತಾಲೂಕು ಅಧ್ಯಕ್ಷ ನಿರಂಜನ್ ಮೂರ್ತಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!