October 5, 2024

MALNAD TV

HEART OF COFFEE CITY

ಚಪ್ಪಲಿಯಿಂದ ಹೊಡೆದ ಮಹಿಳೆ ಬಂಧಿಸುವಂತೆ ಒತ್ತಾಯ : ಪೊಲೀಸ್ ಠಾಣೆ ಎದುರು ಪ್ರತಿಭಟನೆ

1 min read

 

 

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಬಳಿ ನೂರಾರು ವೈದ್ಯಕೀಯ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ನಗರದ ಅಟೋ ಚಾಲಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಭಜರಂಗದಳ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಸಾಥ್ ನೀಡಿದರು. 

 

 

ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ನಗರದ ವಿವಿಧ ಸಂಘಟನೆಗಳು ಸಾಥ್ ನೀಡಿವೆ. 

ಆಟೋ ಚಾಲಕರ ಸಂಘ, ಕರವೇ, ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರೊಟೆಸ್ಟ್ ನಡೆಸಿದ್ದು, ಕೂಡಲೇ ಹಲ್ಲೆಕೋರರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ನಗರ ಪೊಲೀಸ್ ಠಾಣೆ ಮುಂಭಾಗ ಘೋಷಣೆ ಕೂಗುತ್ತಿರುವ ಆರೋಗ್ಯ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಜೊತೆ 100 ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರೋ ನಗರ ಪೊಲೀಸ್ ಠಾಣೆ ಮುಂದೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!