ರೇಣುಕಾಸ್ವಾಮಿ ಕೊಲೆಗೆ ಬಳಸಿದ ದರ್ಶನ್ ಕಾರು ಚಿಕ್ಕಮಗಳೂರಿನ ನಿಷೇಧಿತ ಅರಣ್ಯ ಪ್ರದೇಶದಲ್ಲಿ ಓಡಾಡಿತ್ತಾ ?
1 min read
ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ವಿರುದ್ಧ ಒಂದೊಂದೆ ಪ್ರಕರಣಗಳು ಬಹಿರಂಗಗೊಳ್ಳುತ್ತಿವೆ
ಇದೀಗ ನಿಷೇಧಿತ ಭದ್ರಾ, ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ತಮ್ಮ ಖಾಸಗಿ ಕಾರು ಬಳಸಿದ ಆರೋಪ ಸಹಾ ಕೇಳಿ ಬಂದಿದೆ. ವನ್ಯಜೀವಿ ರಾಯಬಾರಿ ಆಗಿರುವ ದರ್ಶನ್ ರೇಣುಕಾ ಸ್ವಾಮಿ ಕೊಲೆಗೆ ಬಳಸಿದ ಅದೇ ಜೀಪ್ ನಿಂದ ನಿಯಮ ಉಲ್ಲಂಘಿಸಿ ನಿಷೇಧಿತ ಅರಣ್ಯದಲ್ಲಿ ಮೋಜುಮಸ್ತಿ ಮಾಡಿದ್ರ ಎಂಬ ಮಾತುಗಳು ಕೇಳಿ ಬಂದಿವೆ.
ನಟ ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇಳಿ ಬಂದಿದೆ. ವನ್ಯಜೀವಿಗಳ ನಿಷೇಧಿತ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಕೊಲೆಗೆ ಬಳಸಿದ ಜೀಪ್ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪ ಬಂದಿದೆ. ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿ ಆಗಿರುವ ನಟ ದರ್ಶನ್ ಇತ್ತೀಚೆಗೆ ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರಂತೆ, ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿಗಳ ಜೊತೆ ಬಾಡೂಟ ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಅರಣ್ಯ ಕಾಯ್ದೆ ಆರೋಪದಡಿಯಲ್ಲಿ ಫೋಟೋಗಳು ವೈರಲ್ ಆಗಿವೆ. ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಖಾಸಗಿ ಕಾರುಗಳ ಬಳಕೆ ನಿಷಿದ್ಧವಾಗಿದೆ. ಚಿಕ್ಕಮಗಳೂರಿನ ಅರಣ್ಯ ಸಿಬ್ಬಂದಿಗಳ ವಿರುದ್ಧ ಸಹಾ ಗಂಭೀರ ಆರೋಪ ಕೇಳಿ ಬಂದಿದೆ. ಸಾಮಾನ್ಯ ಜನರಿಗೆ ಕಠಿಣ ನಿಯಮಗಳನ್ನು ಹೇಳುವ ಅರಣ್ಯ ಇಲಾಖೆ ಇದಕ್ಕೆ ಯಾವ ಪ್ರತಿಕ್ರಿಯೆ ನೀಡುತ್ತದೆ ಕಾದು ನೋಡಬೇಕು. ಕೊಲೆ ಆರೋಪ ಬೆನ್ನಲ್ಲೇ ದರ್ಶನ್ ವಿರುದ್ಧ ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪ ಇದೀಗ ಹಬ್ಬಿದೆ. ಜಿಲ್ಲೆಯ ಹಲವೆಡೆ ಫೋಟೋಗಳು ವೈರಲ್ ಆಗಿವೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

