May 5, 2024

MALNAD TV

HEART OF COFFEE CITY

ಕನ್ಯಾಡಿ ದಿನೇಶ್ ಹತ್ಯೆ, ಆರೋಪಿ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು: ಧರ್ಮಸ್ಥಳದ ಕನ್ಯಾಡಿ ಗ್ರಾಮದ ದಿನೇಶ್ ಕೊಲೆಯಾಗಿದ್ದು, ಕೊಲೆ ಆರೋಪಿ ಕಿಟ್ಟಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ದಲಿತ, ಪ್ರಗತಿ ಪರ ಸಂಘಟನೆಗಳು ಮತ್ತು ವಿವಿಧ ಪಕ್ಷದ ಮುಖಂಡರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಹಾತ್ಮಗಾಂಧಿ ರಸ್ತೆಯಲ್ಲಿ ಸಾಗಿ ಆಜಾದ್ ವೃತ್ತ ತಲುಪಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆರೋಪಿಯನ್ನು ಬಂಧಿಸುವಲ್ಲಿ ಪೆÇಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ, ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿರುವ ಜನಪ್ರತಿನಿಧಿಗಳು, ಧರ್ಮಸ್ಥಳದಲ್ಲಿ ಬಜರಂಗದಳದ ಕಾರ್ಯಕರ್ತನಿಂದ ದಿನೇಶ್ ಕೊಲೆಯಾಗಿದ್ದು, ಇದು ಬಿಜೆಪಿಯವರ ಕಣ್ಣಿಗೆ ಏಕೆ ಕಾಣುತ್ತಿಲ್ಲವೆಂದು ಪ್ರಶ್ನಿಸಿದರು. ಸರ್ಕಾರದ ಕಣ್ಣು ತೆರೆಸಲು ಮತ್ತು ಆರೋಪಿ ಬಂಧನಕ್ಕೆ ಒತ್ತಾಯಿಸಿ ಚಿಕ್ಕಮಗಳೂರಿನಿಂದ ಧರ್ಮಸ್ಥಳಕ್ಕೆ ನೂರಾರು ಜನರು ಪಾದಯಾತ್ರೆ ತೆರಳಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ಧರ್ಮಸ್ಥಳದ ಕನ್ಯಾಡಿ ಗ್ರಾಮದ ದಿನೇಶ್ ಕೊಲೆಯಾಗಿರುವುದು ಆಡಳಿತ ಪಕ್ಷ ಬಿಜೆಪಿ ಕಣ್ಣಿಗೆ ಕಾಣಿಸುತ್ತಿಲ್ಲವೆ ಎಂದು ಪ್ರಶ್ನಿಸಿ, ನಾವು ದಲಿತ, ಶೋಷಿತರ ಪರ ಎನ್ನುವ ಈ ಕ್ಷೇತ್ರದ ಶಾಸಕ ಸಿ.ಟಿ.ರವಿ ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಿದ್ದು, ದಿನೇಶ್ ಕುಟುಂಬಕ್ಕೆ ಪರಿಹಾರ ನೀಡಲು ಮುಂದಾಗದಿರುವುದು ಅವರ ಡೋಂಗಿ ರಾಜಕಾರಣವನ್ನು ತೋರಿಸುತ್ತದೆ ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!