May 1, 2024

MALNAD TV

HEART OF COFFEE CITY

ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು, ಮೊಟ್ಟೆ ವಿತರಣೆ

1 min read

ಚಿಕ್ಕಮಗಳೂರು : ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಇವರುಗಳ ಸಂಯುಕ್ತಾಶ್ರಯದಲ್ಲಿ ತಮಿಳು ಕಾಲೋನಿಯ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆಗೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಚಾಲನೆ ನೀಡಿದರು.
ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಅಪೌಷ್ಠಿಕತೆ ನಿವಾರಣೆಗಾಗಿ ಮದ್ಯಾಹ್ನ ಊಟದ ಸಮಯದಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣನ್ನು ವಿತರಣೆ ಮಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ತಮಿಳು ಕಾಲೋನಿಯ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಚಾಲನೆ ನೀಡಲಾಯಿತು.
ಈ ವೇಳೆ ಸ್ಥಳೀಯ ನಗರಸಭಾ ಸದಸ್ಯರಾದ ಮಂಜುಳ ಶ್ರೀನಿವಾಸ್, ನಗರಸಭಾ ನಾಮಿನಿ ಸದಸ್ಯರಾದ ರವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಶಾಲಾ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!