May 10, 2024

MALNAD TV

HEART OF COFFEE CITY

ಬರಗಾಲದ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ: ಜಿಲ್ಲಾಧಿಕಾರಿ ಮೀನಾ ನಾಗರಾಜ್

1 min read

ಚಿಕ್ಕಮಗಳೂರು: ರಾಜ್ಯ ಸರ್ಕಾರದಿಂದ 12 ಕೋಟಿ ರೂ ಹಣ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ತಲೆದೊರಿರುವ ಬರಗಾಲ ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ದವಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕುಡಿಯುವ ನೀರಿನ ಸಮಸ್ಯೆ ತಲೆದೊರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅಲ್ಲದೇ ಮೇವಿನ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಿದ್ದು ಅಮೃತ್ ಮಹಲ್ ಕಾವಲ್ ಪ್ರದೇಶದಲ್ಲಿ ಮೇವು ಬೆಳೆದು ಪಕ್ಕದ ಚಿತ್ರದುರ್ಗ ಜಿಲ್ಲೆಗೆ ಸಹಾ ಕೊಡುತ್ತೇವೆ ಎಂದು ಡಿ.ಸಿ ತಿಳಿಸಿದರು. ಜಿಲ್ಲೆಯಲ್ಲಿ ಬರಗಾಲದಿಂದ ಕೃಷಿ, ತೋಟಗಾರಿಕೆ ಬೆಳೆಗಳ ನಷ್ಟ 60 ಕೋಟಿ ರೂಪಾಯಿಗಳಿಗೂ ಅಧಿಕವಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎಸ್ ಮೀನಾ ನಾಗರಾಜ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಸಿಈಓ ಗೋಪಾಲಕೃಷ್ಣ ಜಿಲ್ಲೆಯ12 ಗ್ರಾಮಗಳಲ್ಲಿ ಅತೀವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!