May 20, 2024

MALNAD TV

HEART OF COFFEE CITY

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ

1 min read

ಚಿಕ್ಕಮಗಳೂರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಉಮಾ ಪ್ರಶಾಂತ್ ರವರನ್ನು ರಾಜ್ಯ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಜವಾಬ್ದಾರಿವಹಿಸಿಕೊಂಡ ಮೇಲೆ ಉಮಾ ಪ್ರಶಾಂತ್ ರವರು ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮರ್ಥವಾಗಿ ಅಧಿಕಾರ ನಡೆಸಿದ್ದರು. ಮಹಿಳೆಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಬಂದ ನಂತರ ಅನೇಕ ವಿದ್ಯಾರ್ಥಿನಿಯರುಗಳಿಗೆ ಹಾಗೂ ಮಹಿಳೆಯರಿಗೆ ಆದರ್ಶಪ್ರಾಯರಾಗಿದ್ದರು.

ರಾಜ್ಯ ಸರ್ಕಾರವು ಉಮಾ ಪ್ರಶಾಂತ್ ರವರನ್ನು ಚಿಕ್ಕಮಗಳೂರಿನಿಂದ ವರ್ಗಾವಣೆ ಮಾಡಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ನಿಯೋಜಿಸಿದೆ. ಚಿಕ್ಕಮಗಳೂರು ಜಿಲ್ಲಾ ಕೇಂದ್ರಕ್ಕೆ ಅಮಥೆ ವಿಕ್ರಮ್ ರವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ನಿಯೋಜನೆ ಮಾಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!