May 5, 2024

MALNAD TV

HEART OF COFFEE CITY

ಲಸಿಕೆ ವದಂತಿಗೆ ಕಿವಿಗೊಡದಿರಿ: ಪ್ರಾಣೇಶ್

1 min read

 

ಮೂಡಿಗೆರೆ: ಕೊರೋನಾ ಲಸಿಕೆ ಪಡೆಯುವ ಕುರಿತು ಹಬ್ಬುತ್ತಿರುವ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯಲು ಮುಂದಾಗಬೇಕೆಂದು ಉಪಸಭಾಪತಿ ಎಂ.ಕೆ.ಪ್ರಾಣೇಶ್ ತಿಳಿಸಿದರು.

ಪಟ್ಟಣ ಬಾಲಕಿಯರ ಪ್ರೌಢಶಾಲೆಯಲ್ಲಿ 15 ರಿಂದ 18 ವರ್ಷದವರಿಗೆ ನೀಡುವ ಲಸಿಕೆ ಅಭಿಯಾನಕ್ಕೆ ಚಾಲನೇ ನೀಡಿ ಮಾತನಾಡಿ, ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದುದು. ಸರ್ಕಾರ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿದೆ ಎಂದು ತಿಳಿಸಿದರು. ಈಗ ಮಾರಕವಾಗಿರುವ ಕೊರೋನ ತಡೆಗೂ ಕಾರ್ಯಕ್ರಮವನ್ನು  ಹಮ್ಮಿ ಕೊಂಡಿದ್ದು ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡುತ್ತಿದ್ದು ಎಲ್ಲಾ ವಿದ್ಯಾರ್ಥಿಗಳು ಲಸಿಕೆಯನ್ನು ತೆಗೆದುಕೊಂಡು ಕರೋನ ವಿರುದ್ದ ಹೋರಾಟ ನಡೆಸಬೇಕೆಂದರು.

ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್‍ರಾಜ್‍ವಹಿಸಿದ್ದರು. ಆರೋಗ್ಯಾಧಿಕಾರಿ ಡಾ. ಸುಂದರೇಶ್, ಪ್ರಾಂಶುಪಾಲ ಬಿ.ಬಿ.ವಿರೂಪಾಕ್ಷ, ಸಹ ಶಿಕ್ಷಕರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!