ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿ ಹೊಡೆದ ಕಾರ್ – ನಾಲ್ವರು ಗಂಭೀರ
1 min read
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅತಿ ವೇಗದ ಚಾಲನೆ ಘಟನೆಗೆ ಕಾರಣ ಎನ್ನಲಾಗಿದ್ದು ಕಾರು ಕಂದಕಕ್ಕೆ ಬಿದ್ದ ರಭಸಕ್ಕೆ ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

