May 17, 2024

MALNAD TV

HEART OF COFFEE CITY

ಜಮೀನು ಗಲಾಟೆ, ಕಾಲಿಗೆ ಗುಂಡು ಹೊಡೆದ ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ

1 min read

ಚಿಕ್ಕಮಗಳೂರು : ಜಮೀನು ವಿವಾದ ಹಿನ್ನೆಲೆ ಮಾತುಕತೆಗೆ ತೆರಳಿದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷ ಶೂಟ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಲಿಗೆ ಗುಂಡ ವ್ಯಕ್ತಿಯನ್ನ ನಾರಾಯಣ್ ರಾಜ್ ಎಂದು ಗುರುತಿಸಲಾಗಿದೆ. ಮಾಕೋನಹಳ್ಳಿ ಗ್ರಾಮದ ರೈತ ಸಂಘದ ದುಗ್ಗಪ್ಪಗೌಡ ಹಾಗೂ ಮಂಚೇಗೌಡ ನಡುವೆ ಜಮೀನು ವಿವಾದವಿದ್ದು, ಮಂಚೇಗೌಡ ತಮ್ಮ ಜಮೀನನ್ನ ಮನೋಜ್ ಎಂಬುವರಿಗೆ ಮಾರಾಟ ಮಾಡಿದ್ದರು. ಮಂಚೇಗೌಡ ಅವರ ಜಮೀನು ಖರೀದಿಸಿದ ಮನೋಜ್ ಜಮೀನಿನ ಸರ್ವೇ ಕಾರ್ಯ ಮುಗಿಸಿದ್ದರು. ಈ ವೇಳೆ ಮನೋಜ್ ಖರೀದಿಸಿದ ಜಾಗವನ್ನ ದುಗ್ಗಪ್ಪಗೌಡ ಅವರು ಒತ್ತುವರಿ ಮಾಡಿ ಮನೆ ಕಟ್ಟಿದ್ದರು ಎಂದು ಹೇಳಲಾಗಿದೆ.

ಹಾಗಾಗಿ, ಜಮೀನು ಖರೀದಿಸಿದ ಮನೋಜ್ ಹಾಗೂ ಅದೇ ಜಮೀನು ಪಕ್ಕದ ಜಮೀನಿನ ದುಗ್ಗಪ್ಪಗೌಡರಿಗೆ ಜಮೀನು ವಿವಾದ ಕೂಡ ಇತ್ತು. ಈ ಬಗ್ಗೆ ಮಾತನಾಡಲು ದುಗ್ಗಪ್ಪಗೌಡ ಅವರ ಮನೆ ಬಳಿ ಹೋದಾಗ ಮಹಡಿ ಮೇಲೆ ನಿಂತಿದ್ದ ದುಗ್ಗಪ್ಪಗೌಡ ಕೋವಿಯಿಂದ ಮಾತುಕತೆಗೆ ಬಂದವರ ಮೇಲೆ ಗುಂಡು ಹಾರಿದ್ದಾರೆ. ನಾರಾಯಣ್‍ರಾಜ್ ಎಂಬುವರ ಕಾಲಿಗೆ ಗುಂಡು ತಗುಲಿದ್ದು ಕೂಡಲೇ ಅವರನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂಡಿಗೆರೆ ಪೊಲೀಸರು ರೈತ ಸಂಘದ ಅಧ್ಯಕ್ಷ ದುಗ್ಗಪ್ಪಗೌಡರನ್ನ ಬಂಧಿಸಿದ್ದಾರೆ. ಮೂಡಿಗೆರೆ ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗುಂಡು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ನಾರಾಯಣ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!