April 29, 2024

MALNAD TV

HEART OF COFFEE CITY

ಧಾರಕಾರ ಮಳೆಗೆ ಧರೆಗೆ ಉರುಳಿದ ವಿದ್ಯುತ್ ಕಂಬ

1 min read

ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರದಿಂದಾಗಿ ಬಹಳಷ್ಟು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ, ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.

ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಕುದುರೆಮುಖ, ಶೃಂಗೇರಿ ತಾಲೂಕಿನಲ್ಲಿ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಕಾರ ಮಳೆಯಿಂದಾಗಿ ಕೆಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ಮಲೆನಾಡಿನ ಭಾಗಶಃ ಭಾಗಗಳಲ್ಲಿ ಕತ್ತಲೆ ಆವರಿಸಿದೆ. ಮಲೆನಾಡಲ್ಲಿ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲೆಗಳಿಗೆ ನೀಡಿದ್ದ ರಜೆಯು ಮುಂದುವರಿಕೆಯಾಗಿದೆ. ಭಾರೀ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!