May 15, 2024

MALNAD TV

HEART OF COFFEE CITY

ವೃತ್ತಮಟ್ಟದ ಅರಣ್ಯ ಕ್ರೀಡಾಕೂಟ ಅಂತ್ಯ, ಹಲವು ತಂಡಗಳಿಗೆ ಪ್ರಶಸ್ತಿ

1 min read

ಚಿಕ್ಕಮಗಳೂರು: ಪ್ರತಿನಿತ್ಯ ಕರ್ತವ್ಯದ ಒತ್ತಡದ ನಡುವೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳು ವುದರಿಂದ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ತಿಳಿಸಿದರು.ಇತ್ತೀಚೆಗೆ ನಗರದ ರಾಮನಹಳ್ಳಿಯ ಜಿಲ್ಲಾ ಸಶಸ್ತç ಮೀಸಲು ಪಡೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ವೃತ್ತಮಟ್ಟದ ಅರಣ್ಯ ಇಲಾಖೆ ಕ್ರೀಡಾಕೂಟ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ನಿತ್ಯ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಸಿಬ್ಬಂದಿಗಳ ಮನಸ್ಸಿಗೆ ನೆಮ್ಮದಿ ಮತ್ತು ಕರ್ತವ್ಯ ನಿರ್ವಹಣೆಗೆ ಸ್ಫೂರ್ತಿ ತುಂಬುತ್ತದೆ ಎಂದ ಅವರು, ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಕೆಲಸ ಸಮನ್ವಯತೆಯಿಂದ ಕೂಡಿದ್ದು ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ|ಸುನೀಲ್ ಪಂಪಾರ್ ಸಮಾ ರಂಭವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ವೃತ್ತ, ಪ್ರಾದೇ ಶಿಕ ಅರಣ್ಯ ವಿಭಾಗ, ಭದ್ರಾ ಹುಲಿ ಸಂರಕ್ಷಿತ, ಸಾಮಾಜಿಕ ಅರಣ್ಯ ಅಭಿವೃದ್ಧಿ ನಿಗ ಮದ ನೌಕರರು ಪಾಲ್ಗೊಂಡಿದ್ದು, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ ಶ್ರದ್ಧೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಹೇಳಿದರು.ಮಂಗಳವಾರ ನಡೆದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಎಂ.ಎಚ್.ಅಕ್ಷಯ್ ಕ್ರೀಡಾಕೂಟದಲ್ಲಿ ಗೆದ್ದ ತಂಡಗಳಿಗೆ ಬಹುಮಾನ ವಿತರಣೆ ಮಾಡಿದರು. ಭದ್ರ ಸಂರಕ್ಷಿತ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪ್ರಭಾಕರನ್ ಕಾರ್ಯ ಕ್ರಮದ ಅಧ್ಯಕ್ಷತೆವಹಿಸಿದ್ದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ, ಕೊಪ್ಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿಲೇಶ್ ಶಿಂದೆ ದೇವೂಬ, ಕೊಪ್ಪ ವಿಭಾಗದ ಸತೀಶ್, ಬಿ.ಎಂ.ಬಸಪ್ಪ ಎಲ್.ನಂದೀಶ್ ಸೇರಿದಂತೆ ಅನೇಕರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!