May 13, 2024

MALNAD TV

HEART OF COFFEE CITY

ಪೋಕ್ಸೋ ಆರೋಪಿ ಠಾಣೆಯಿಂದಲೇ ಎಸ್ಕೇಪ್, ಕೊಪ್ಪದಲ್ಲಿ ಬಂಧನ

1 min read

ಚಿಕ್ಕಮಗಳೂರು : ಪೋಕ್ಸೋ ಕೇಸ್ ಆರೋಪದಡಿ ಬಂಧಿಸಿ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಿಂದಲೇ ನಾಪತ್ತೆಯಾಗಿದ್ದ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಠಾಣೆಯಲ್ಲಿ ನಡೆದಿದೆ. ಬಾಳೆಹೊನ್ನೂರು ಸಮೀಪದ ಗ್ರಾಮವೊಂದರಲ್ಲಿ ಯುವಕನೊಬ್ಬ ಅಪ್ರಾಪ್ತೆಯನ್ನ ಬಲವಂತವಾಗಿ ವಾಹನದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದನೆಂಬ ಆರೋಪದಡಿ ಬಾಳೆಹೊನ್ನೂರ ಪೊಲೀಸರು ಆರೋಪಿಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದರು. ಆದರೆ, ಆರೋಪಿ ಠಾಣೆಯಿಂದಲೇ ಪರಾರಿಯಾಗಿದ್ದ. ಬಾಳೆಹೊನ್ನೂರು ಸಮೀಪದ ನಿಜಾಮ್ ಎಂಬ ಯುವಕ ಗ್ರಾಮವೊಂದರ 12 ವರ್ಷದ ಅಪ್ರಾಪ್ತ ಬಾಲಕಿ ತನ್ನ ಮನೆಯ ಸಮೀಪದ ಅಂಗಡಿಯಲ್ಲಿ ವಸ್ತುಗಳನ್ನ ಖರೀದಿಸಿ ಮನೆಗೆ ಬರುತ್ತಿದ್ದಾಗ ಆರೋಪಿಯು ಗೂಡ್ಸ್ ವಾಹನದಲ್ಲಿ ಬಂದು ಯುವತಿಗೆ ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. ಯುವತಿ ನಿರಾಕರಿಸಿದಾಗ ಆತ ಆಕೆಯನ್ನು ವಾಹನದೊಳಗೆ ಎಳೆದುಕೊಂಡು ಹೋಗಿದ್ದಾನೆ ಎಂದು ಹೇಳಲಾಗಿದೆ. ಗ್ರಾಮದಿಂದ ಸುಮಾರು ಐದಾರು ಕಿ.ಮೀ. ದೂರ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಯುವಕ ಬಾಲಕಿಗೆ ನೀನು ನನ್ನ ಧರ್ಮಕ್ಕೆ ಮತಾಂತರವಾಗು ನಿನ್ನನ್ನು ಮದುವೆಯಾಗುತ್ತೇನೆ, ನಿನಗೆ ಮೊಬೈಲ್ ಕೊಡಿಸುತ್ತೇನೆ ಎಂದು ಒತ್ತಾಯಿಸಿ ಮೈ-ಕೈ ಮುಟ್ಟಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಬಳಿಕ ಯುವತಿ ಆರೋಪಿಗೆ ಬೈದು ಕೂಗಾಡಿದ ಹಿನ್ನೆಲೆ ಆತ ಆಕೆಯನ್ನ ವಾಪಾಸ್ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಇನ್ನ ಗಮನಿಸಿದ ಕೆಲ ಸ್ಥಳೀಯರು ಅನುಮಾನಗೊಂಡು ವಾಹನವನ್ನು ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿ ಆಕೆಯ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಅಪ್ರಾಪ್ತ ಬಾಲಕಿ ಬಾಳೆಹೊನ್ನೂರು ಠಾಣೆಯಲ್ಲಿ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ದೂರು ದಾಖಲಿಸಿದ್ದಳು. ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದರು. ಆದರೆ, ಆತ ಪೆÇಲೀಸ್ ಠಾಣೆಯಿಂದಲೇ ಪರಾರಿಯಾಗಿದ್ದನು. ಆರೋಪಿ ಠಾಣೆಯಿಂದಲೇ ಎಸ್ಕೇಪ್ ಆದ ಕೂಡಲೇ ಅಲರ್ಟ್ ಆದ ಪೊಲೀಸರು ಕಾಳಿಗೆ ಚಕ್ರ ಕಟ್ಟಿಕೊಂಡು ಹುಡುಕಿ ಬಾಳೆಹೊನ್ನೂರಿನಿಂದ 40 ಕಿ.ಮೀ. ದೂರದ ಕೊಪ್ಪದಲ್ಲಿ ಆರೋಪಿಯನ್ನ ಬಂಧಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!