May 14, 2024

MALNAD TV

HEART OF COFFEE CITY

ಆರೋಪಿಗಳನ್ನು ಪತ್ತೆ ಹಚ್ಚುವುದರಲ್ಲಿ ಪೊಲೀಸ್ ಇಲಾಖೆಗೆ ಸಹಕರಿಸಿದ್ದ ಶ್ವಾನಕ್ಕೆ ಬೀಳ್ಕೊಡುಗೆ

1 min read

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳು ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್‍ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ್ಕೊಡುಗೆ ನೀಡಿದೆ.

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ ದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸುವಲ್ಲಿ ಶ್ರಮಿಸಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು.‌ ಪೊಲೀಸ್ ಶ್ವಾನಕ್ಕೆ ನಗರದ ಡಿ.ಎ.ಆರ್. ಆವರಣದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆದಿದೆ. ಶ್ವಾನದ ಹ್ಯಾಂಡ್ಲಾರ್ ಗಳಾಗಿ ಮಂಜುನಾಥ ಹಾಗೂ ಸಹಾಯಕ ನಿರ್ವಾಹಕರಾದ ಕುಮಾರ್ ಇವರುಗಳು ಕರ್ತವ್ಯ ನಿರ್ವಹಿಸುತ್ತಾರೆ. ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ 204 ಪ್ರಕರಣಗಳಲ್ಲಿ 35 ಪ್ರಕರಣದಲ್ಲಿ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ. ಈ ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿಯೂ ಹಲವು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿತ್ತು. ಶ್ವಾನದ ಹ್ಯಾಂಡ್ಲರ್ ಗಳಾದ ಮಂಜುನಾಥ್ ಹಾಗೂ ಕುಮಾರ್‍ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸಂಶನ ಪತ್ರ ನೀಡಿ ಗೌರವಿಸಿರುತ್ತಾರೆ. ಈ ಶ್ವಾನ 2013ರಲ್ಲಿ ಪೊಲೀಸ್ ಇಲಾಖೆ ಸೇರಿತ್ತು. ಅಲ್ಲಿಂದ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಹಕರಿಸಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!