May 15, 2024

MALNAD TV

HEART OF COFFEE CITY

ಸಿ.ಟಿ ರವಿ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ : ತನಿಖೆಗೆ ಸಿ.ಟಿ ರವಿ ಒತ್ತಾಯ

1 min read

ಚಿಕ್ಕಮಗಳೂರು: ಮಾಜಿ ಶಾಸಕ ಸಿಟಿ ರವಿ ಅವರ ಆಪ್ತ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿಯಲ್ಲಿ ನಡೆದಿದೆ.
ಗುರುವಾರ ಮಧ್ಯರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ರಾಡ್’ನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತಲೆ ಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ದುರ್ಗೇಶ್ ನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಆಸ್ಪತ್ರೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ ಸಿಟಿ ರವಿ ಆಸ್ಪತ್ರೆ ಆಗಮಿಸಿ ದುರ್ಗೇಶ್ ನ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಈ ಕುರಿತು ತನಿಖೆಗೆ ಒತ್ತಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹತ್ಯೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ. ರಾಡ್ ನಿಂದ ಹಲ್ಲೆ ಮಾಡಿರುವ ಉದ್ದೇಶ ಕೊಲೆ ಮಾಡುವುದು. ಮಂಕಿ ಕ್ಯಾಪ್ ಗೌಸ್? ಹಾಕಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದರು.
ಇನ್ನೂ ದುರ್ಗೆಶ್ ಬಗರ್ ಹುಕುಂ ಸಾಗುವಳಿ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ್ದಾರೆ. ಗೋಮಾಳ ಜಮೀನಿನಲ್ಲಿ ಕ್ರಷರ್‌ ಅನುಮತಿ ನೀಡಿದ್ದಾರೆ. ಆದರೆ, ರೈತರಿಗೆ ರಾಗಿ ಬೆಳೆಯಲು ಬಿಡುವುದಿಲ್ಲ. ಇದರ ವಿರುದ್ಧ ದುರ್ಗೇಶ್ ಹೋರಾಟ ಮಾಡಿದ್ದಾರೆ. ದುರುದ್ದೇಶ ಪೂರ್ವಕವಾಗಿ ಹತ್ಯೆ ಮಾಡಲು ಹಲ್ಲೆ ಮಾಡಲಾಗಿದೆ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!