May 15, 2024

MALNAD TV

HEART OF COFFEE CITY

ಅತ್ತು ಕರೆದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ…!

1 min read
Appointment of in-charge minister for the district...!

Appointment of in-charge minister for the district...!

ಚಿಕ್ಕಮಗಳೂರು : ಬಹಳಷ್ಟು ದಿನಗಳಿಂದ ಖಾಲಿ ಇದ್ದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಕೊನೆಗು ರಾಜ್ಯ ಸರ್ಕಾರ ಮಾಡಿದ್ದು, ನರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ರವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅತ್ತು ಕರೆದು ಔತಣ ಮಾಡಿಸಿಕೊಂಡರು ಎಂಬಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆ.ಎಸ್. ಈಶ್ವರಪ್ಪ ರಾಜಿನಾಮೆ ನಂತರ ತೆರವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡುವಂತೆ ಜನ ಸಾಮಾನ್ಯರು, ವಿರೋಧ ಪಕ್ಷಗಳ ನಾಯಕರುಗಳು ಭಾರಿ ಬೇಡಿಕೆಯ ನಂತರ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ರವನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದೆ.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿರುವ ಪ್ರಕೃತಿ ವಿಕೋಪಗಳನ್ನು ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ವೀಕ್ಷಣೆ ಪ್ರವಾಸ ಮಾಡುತ್ತಿರುವ ಸಂದರ್ಭದಲ್ಲೇ ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Finally, the appointment of the minister in charge of the district...!
Finally, the appointment of the minister in charge of the district…!

ಈಗಾಗಲೇ ಜಿಲ್ಲೆಯಲ್ಲಿರುವ ಆಡಳಿತ ಪಕ್ಷಗಳ ಸ್ಥಳೀಯ ಶಾಸಕರುಗಳು ದೇಶ ಹಾಗೂ ರಾಜ್ಯ ಮಟ್ಟದಲ್ಲಿ ಹುನ್ನತ ಹುದ್ದೆಗಳನ್ನು ಅಲಂಕರಿಸಿ, ಶಾಸಕರುಗಳ ಕ್ಷೇತ್ರಗಳಲ್ಲಿ ಕಾಣುವುದೆ ಅಮವಾಸ್ಯೆ – ಹುಣ್ಣಿಮೆಯ ಅತಿಥಿಗಳಾಂತಾಗಿದ್ದಾರೆ. ಇನ್ನೂ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಔಚಿತ್ಯವನ್ನು ಕೇಳುವುದೇ ಬೇಡದಂತಾಗಿದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು ಜಿಲ್ಲೆಗೆ ಬರುವ ಅತಿಥಿಗಳಂತಾಗಿದ್ದು, ಜಿಲ್ಲೆಯಲ್ಲಿ ಭಾರಿ ಅತಿವೃಷ್ಠಿ ಸಂಭವಿಸಿದ ಸಂದರ್ಭಗಳಲ್ಲು ಜನಸಾಮಾನ್ಯರ ಕೂಗು ಕೇಳುವವರಿಲ್ಲದಂತಾಗಿತ್ತು.

ಇದೀಗಾ ಜಿಲ್ಲೆಯಲ್ಲಿ ಮತ್ತೆ ಮಳೆಯ ಅವಾಂತರ ತಲೆದೋರಿದ್ದು, ಈಗ ನೇಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್ ರವರು ಸಹ ಹತ್ತರ ಜೊತೆ ಹನ್ನೊಂದು ಎಂಬಂತಾಗದೆ ಜಿಲ್ಲೆಯ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂಧಿಸುವ ಸಚಿವರಾಗುತ್ತಾರೆಯೇ ಕಾದು ನೋಡಬೇಕು..

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!