April 27, 2024

MALNAD TV

HEART OF COFFEE CITY

ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು

1 min read

 

ನಗರದ ಆದ್ರಿಕಾ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ 15 ಜನ ಬಿಜೆಪಿ ಕಾರ್ಯಕರ್ತರ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಸಚಿವ ಶಿವರಾಜ್ ತಂಗಡಗಿ ಮೋದಿ ಹೆಸರು ಹೇಳಿದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ‌ಅನುಮತಿ ಪಡೆಯದೆ ನರೇಂದ್ರ ಮೋದಿಯವರ ಭಾವಚಿತ್ರ ಹಿಡಿದು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ ಪ್ರಚಾರ ನಡೆಸಿರುತ್ತಾರೆ ಎಂದು ಸಹಾಯಕ ಚುನಾವಣಾಧಿಕಾರಿ ಮೇನಕಾ ಚೌಹಾಣ್ ನೀಡಿದ ದೂರಿನ ಆಧಾರದ ಮೇಲೆ ಕಲಂ 188 ಅಡಿ ಪ್ರಕರಣ ದಾಖಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು , ಮಧ್ಯಾಹ್ನ ನಗರ ಠಾಣೆಗೆ ತೆರಳಿ ದೂರು ನೀಡಿದ್ದರು ಸಂಜೆ ನ್ಯಾಯಾಲಯ ಅನುಮತಿ ನೀಡಿದ ನಂತರ ಎಫ್ಐಆರ್ ದಾಖಲಾಗಿದೆ.
ಆದರೆ ಯಾವುದೇ ಕಾರ್ಯಕರ್ತರ ಹೆಸರು ದೂರಿನಲ್ಲಿ ದಾಖಲಾಗಿಲ್ಲ. ವಿಡಿಯೋ ವೀಕ್ಷಿಸಿದ ನಂತರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದವರ ಹೆಸರು ಸೇರ್ಪಡೆಗೊಳ್ಳಲಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!