May 4, 2024

MALNAD TV

HEART OF COFFEE CITY

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹಾಕಿಸಿ: ಡಾ.ಉಮೇಶ್

1 min read

 

ಚಿಕ್ಕಮಗಳೂರು: ಭಾನುವಾರದಂದು ಪಲ್ಸ್‍ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಬೂತ್‍ಗಳಿಗೆ ಕರೆತಂದು ತಪ್ಪದೇ ಪಲ್ಸ್ ಪೊಲೀಯೋ ಲಸಿಕೆ ಹಾಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.ಫೆ. 27 ದೇಶ, ರಾಜ್ಯ ಸೇರಿದಂತೆ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಪೊಲೀಯೋ ಲಸಿಕಾ ಅಭಿಯಾನ ನಡೆಯಲಿದೆ. ಅದರಂತೆ ಅಂಗನವಾಡಿ, ಶಾಲೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪಲ್ಸ್ ಪೊಲೀಯೋ ಬೂತ್‍ಗಳನ್ನು ತೆರೆಯಲಾಗಿದ್ದು ಪೋಷಕರು 5 ವರ್ಷದೊಳಗಿನ ಮಕ್ಕಳನ್ನು ಇಲ್ಲಿಗೆ ಕರೆತಂದು ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿದರು.

ಪೊಲೀಯೋ ಲಸಿಕೆ ಹಾಕಿಸುವುದರಿಂದ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಪೊಲೀಯೋ ಖಾಯಿಲೆಯನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 76,643 ಮಕ್ಕಳನ್ನು ಗುರುತಿಸಲಾಗಿದೆ. ಲಸಿಕಾ ಅಭಿಯಾನ ಮೂರು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು, ಇನ್ನು 2 ದಿನದಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಮನೆ ಮನೆಗಳಿಗೆ ತೆರಳಿ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲಾಗುವುದು, ಮತ್ತು 3 ನೇ ದಿನಗಳಲ್ಲಿ ಲಸಿಕೆಯಿಂದ ವಂಚಿತವಾದ ಮಕ್ಕಳಿಗೆ ನೀಡಲಾಗುವುದು ಎಂದರು.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪೋಷಕರು 5 ವರ್ಷದೊಳಗಿನ ಮಕ್ಕಳನ್ನು ತಪ್ಪದೇ ಬೂತ್‍ಗಳಿಗೆ ಕರೆ ತಂದು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.

.27 ರಿಂದ ಮೂರು ದಿನಗಳ ಪಲ್ಸ್ ಪೊಲೀಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೊದಲ ದಿನ ಬೂತ್ ಗಳಲ್ಲಿ ನಡೆಯಲಿದ್ದು, ಎರಡನೇ ಹಾಗೂ ಮೂರನೇ ದಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಹೋಗಿ ಲಸಿಕೆ ನೀಡಲಾಗುತ್ತದೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!