May 3, 2024

MALNAD TV

HEART OF COFFEE CITY

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ

1 min read

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು.

ಪತ್ನಿ ಶ್ರೀಮತಿ ಪೂರ್ಣಿಮಾ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ

ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು. 2014 ರಿಂದೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!