ಜಿಲ್ಲೆಯಲ್ಲಿ ನಾಲ್ಕು ಕೊರೊನಾ ಪ್ರಕರಣಗಳು ಪತ್ತೆ
1 min readಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕ ಆರಂಭವಾಗಿದೆ. ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲೂ ನಾಲ್ಕು ಹೊಸಾ ಪ್ರಕರಣಗಳು ಪತ್ತೆಯಾಗಿವೆ. ರ‍್ಯಾಂಡಮ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಚಿಕ್ಕಮಗಳೂರು ತಾಲೂಕಿನವರೇ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಅದರಲ್ಲಿ ಎರಡು ಪ್ರತ್ಯೇಕ ಕಾಲೇಜುಗಳು ವಿದ್ಯಾರ್ಥಿಗಳು ಇರುವುದು ಆತಂಕಕ್ಕೆ ಕಾರಣವಾಗಿದೆ. ಒಟ್ಟು ನಾಲ್ವರಲ್ಲಿ ಇಬ್ಬರು ಹೆಂಗಸರು ಹಾಗೂ ಇಬ್ಬರು ಗಂಡಸರು ಎಂದು ಖಚಿತ ಮಾಹಿತಿ ಮಲ್ನಾಡ್ ಟಿ.ವಿ ಗೆ ಲಭ್ಯವಾಗಿದೆ. ಆದರೆ ಪತ್ತೆಯಾಗಿರುವ ಕೊರೊನಾ ಹೊಸಾ ತಳಿ JN-1ಇರಬಹುದಾ ಎಂಬುದನ್ನು ಖಚಿತ ಪಡಸಿಕೊಳ್ಳಲು ಟೆಸ್ಟ್ ಗಾಗಿ ಸ್ಯಾಂಪಲ್ ಅನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಆರೋಗ್ಯ ಅಧಿಕಾರಿಗಳು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದಾರೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿಕೊಂಡ ನಂತರ ಪಾಸಿಟಿವ್ ಬಂದವರಿಗೆಲ್ಲಾ ಇದೀಗ ಹೋಂ ಐಸೋಲೇಷನ್ ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಲ್ಯಾಬ್ ಫಲಿತಾಂಶ ಬಂದ ಬಳಿಕ ಕೊವಿಡ್ ರೂಪಾಂತರಿ JN-1 ಎಂಬುದನ್ನು ಖಚಿತಪಡಿಸಲಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g