ಎಸ್.ಎಸ್.ಎಲ್.ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಉಚಿತ ಅನ್ನದಾಸೋಹ
1 min readಚಿಕ್ಕಮಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಗ್ರಾಮೀಣ ಭಾಗದಿಂದ ಬಂದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ, 19 ಪರೀಕ್ಷಾ ಕೇಂದ್ರಗಳಲ್ಲಿ ಬಿ.ಜೆ.ಪಿ ಪಕ್ಷದ ವತಿಯಿಂದ ಪಕ್ಷದ ಕಾರ್ಯಕರ್ತರು ಮಧ್ಯಾಹ್ನದ ಉಚಿತ ಅನ್ನದಾಸೋಹ ನಡೆಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು ಹಸಿವಿನಿಂದ ಪರೀಕ್ಷೆ ಬರೆಯಬಾರದು ಎನ್ನುವ ಶಾಸಕ ಸಿ.ಟಿ ರವಿಯವರ ಸೂಚನೆ ಮೇರೆಗೆ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜ್ ಸೇರಿದಂತೆ 19 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಚಿತ ಅನ್ನದಾಸೋಹ ಹಮ್ಮಿಕೊಳ್ಳಲಾಗಿತ್ತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g