May 2, 2024

MALNAD TV

HEART OF COFFEE CITY

ಕಾಫಿ ಉದ್ಯಮವನ್ನು ಸೆರ್ಫಸಿ ಕಾಯ್ದೆಯಿಂದ ಮುಕ್ತಗೊಳಿಸಿ

1 min read

ಚಿಕ್ಕಮಗಳೂರು-ಹವಮಾನ ವೈಪರೀತ್ಯ, ಬೆಲೆಕುಸಿತ, ಬೆಳೆಹಾನಿ, ಅತಿವೃಷ್ಟಿ ಮತ್ತಿತರ ಸಮಸ್ಯೆಯಿಂದಾಗಿ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು, ಬ್ಯಾಂಕ್‍ಗಳು ಸಾಲದ ಮೇಲಿನ ಬಡ್ಡಿದರವನ್ನು ಕಡಿಮೆಗೊಳಿಸುವುದರ ಜತೆಗೆ ಕಾಫಿ ಉದ್ಯಮವನ್ನು ಸೆರ್ಫಸಿ ಕಾಯ್ದೆಯಿಂದ ಮುಕ್ತಗೊಳಿಸಬೇಕು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹೆಚ್.ಟಿ. ಮೋಹನ್‍ಕುಮಾರ್ ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಕಾಫಿ ಬೆಳೆಗಾರರ ಸಹಸಂಸ್ಥೆಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕೆ.ಎನ್,ರಮೇಶ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಾಫಿ ಉದ್ಯಮ ಅತಿವೃಷ್ಟಿ, ಅನಾವೃಷ್ಟಿ, ಭೂಕಸಿತ, ಅಕಾಲಿಕ ಮಳೆ, ಬೆಳೆಹಾನಿ, ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾಡಳಿತ ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಾಫಿ ಉದ್ಯಮ ಅತಿವೃಷ್ಟಿ, ಅನಾವೃಷ್ಟಿ, ಭೂಕಸಿತ, ಅಕಾಲಿಕ ಮಳೆ, ಬೆಳೆಹಾನಿ, ಸೇರಿದಂತೆ ಹಲವು ಸಮಸ್ಯೆಗಳ ಪರಿಣಾಮ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲಾಡಳಿತ ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಿದ್ದು ಸರ್ಕಾರದಿಂದ ಹೆಚ್ಚಿನ ಪರಿಹಾರ ಒದಗಿಸಿಕೊಡಲು ಜಿಲ್ಲಾಡಳಿತ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಕಾಫಿ ಬೆಳೆಗಾರರ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಮಾತನಾಡಿ ಬೆಳೆಹಾನಿ ಪರಿಣಾಮ ತೀವ್ರ ಆರ್ಥಿಕ ಸಂಕಷ್ಟದಿಂದಾಗಿ ಸಾಲದ ಸುಳಿಯಲ್ಲಿ ಸಿಲುಕಿರುವ ಬೆಳೆಗಾರರಿಗೆ ಬ್ಯಾಂಕ್‍ಗಳು ಸಕರಾತ್ಮಕವಾಗಿ ಸ್ಪಂದಿಸಬೇಕು, ಸರ್ಕಾರಕ್ಕೆ ಹೆಚ್ಚಿನ ಆದಾಯ ತಂದುಕೊಡುವಲ್ಲಿ ಕಾಫಿ ಉದ್ಯಮವೂ ಒಂದಾಗಿದೆ. ಇದನ್ನು ಮನಗಾಣಬೇಕಿದೆ ಎಂದರು.
ಬೆಳೆಗಾರರು ಕೂಲಿ ಕಾರ್ಮಿಕರ ಸಮಸ್ಯೆ ಒಂದೆಡೆಯಾದರೆ ಮತ್ತೊಂದೆ ಬೆಲೆ ಸಮಸ್ಯೆ, ಬೆಳೆಹಾನಿಯ ಪರಿಣಾಮ ಬ್ಯಾಂಕ್‍ಗಳಿಂದ ಮಾಡಿದ ಸಾಲವನ್ನು ತೀರಿಸಲಾಗದ ಸ್ಥಿತಿಯಲ್ಲಿ ರೈತರು, ಬೆಳೆಗಾರರು ಇದ್ದು, ಈ ನಡುವೆ ಬ್ಯಾಂಕ್‍ಗಳು ಸರ್ಫೇಸಿ ಕಾಯ್ದೆಯನ್ನೇ ತನ್ನ ಅಸ್ತ್ರವನ್ನಾಗಿಸಿಕೊಂಡು ಸಾಲ ಪಡೆದ ಬೆಳೆಗಾರರಿಗೆ ಸಾಲದ ನೋಟಿಸ್ ನೀಡುವ ಮೂಲಕ ಮತ್ತಷ್ಟು ಹಿಂಜರಿತಕ್ಕೆ ಒಳಗಾಗುವಂತೆ ಮಾಡಿವೆ. ಆದ್ದರಿಂದ ಬ್ಯಾಂಕ್‍ಗಳ ಮೇಲಿನ ಸಾಲದ ಬಡ್ಡಿದರವನ್ನು ಸಂಪೂರ್ಣ ಮನ್ನಾ ಮಾಡಿ ಜತೆಗೆ ಸಾಲ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಕೇಳಿಕೊಂಡರು.

ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್. ಭೋಜೇಗೌಡ ಮಾತನಾಡಿ ಸರ್ಕಾರಕ್ಕೆ ಹೆಚ್ಚಿನ ಆದಾಯ ತಂದು ಕೊಡುವಲ್ಲಿ ಕಾಫಿ ಉದ್ಯಮ ಕೂಡ ಒಂದು. ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಕಾಫಿ ಬೆಳೆಗಾರರಿದ್ದು, ಕಳೆದ ಹಲವು ವರ್ಷಗಳಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಿ ಬೆಳೆಗಾರರು, ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೆಲವರು ಭೂಮಿ ಕಳೆದುಕೊಂಡು ಕಾಫಿ ಮರು ನಿರ್ಮಾಣಕ್ಕೆ ಹಣವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಭೂಮಿ ಕಳೆದುಕೊಂಡ ಬೆಳೆಗಾರರು ಕಾಫಿ ತೋಟಗಳ ಮರು ನಿರ್ಮಾಣಕ್ಕೆ ಮುಂದಾದಲ್ಲಿ ಬ್ಯಾಂಕ್‍ಗಳಿಂದ ಹೊಸದಾಗಿ ಸಾಲ ಸೌಲಭ್ಯವನ್ನು ದೊರಕಿಸಿಕೊಡಬೇಕು. ಆರ್‍ಬಿಐ ನಿರ್ದೇಶನದ ಅನುಸಾರ ಸೆರ್ಫಸಿ ಕಾಯ್ದೆಯನ್ನು ಪುನರ್ ಪರಿಶೀಲಿಸಬೇಕು, ಬೆಳೆ ಸಾಲಕ್ಕೆ ಬಡ್ಡಿ, ಚಕ್ರಬಡ್ಡಿ ಹಾಕಬಾರದು ಎಂದು ಮನವಿ ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!