May 8, 2024

MALNAD TV

HEART OF COFFEE CITY

ಗ್ಯಾಸ್ ಲಾರಿ- ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿ; ಚಾಲಕರು ಪ್ರಾಣಾಪಾಯದಿಂದ ಪಾರು

1 min read

 

ಚಿಕ್ಕಮಗಳೂರು : ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ನಡೆದಿದೆ.
ಗ್ಯಾಸ್ ಲಾರಿ ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದೆ. ಪರಿಣಾಮ ಗಾಡಿಯಲ್ಲಿದ್ದ ಎಳ ನೀರು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದವೆ.
ಅಪಘಾತದಿಂದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಘಾಟಿಯಲ್ಲಿ ಸುಮಾರು 5 ಕಿ.ಮೀ. ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಆಗಿದೆ. ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ನೂರಾರು ವಾಹನಗಳು ಪರದಾಡುವಂತಾಯಿತು.

ಡಿಕ್ಕಿಯ ಪರಿಣಾಮ ಲಾರಿ ಮತ್ತು ಎಳನೀರು ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಾರಿ ಚಾಲಕನ ಕಾಲು ಸಿಲುಕಿಕೊಂಡಿದ್ದು ಸ್ಥಳೀಯರು ಹೊರತೆಗೆದಿದ್ದಾರೆ.

ಈ ಪ್ರಕರಣವು ಬಣಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!