May 14, 2024

MALNAD TV

HEART OF COFFEE CITY

ಕನಕ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಶಾಸಕ ಶ್ರೀನಿವಾಸ್ ಗೆ ಘೇರಾವ್

1 min read

 

 

ಚಿಕ್ಕಮಗಳೂರು.: ಗುರು ರೇವಣಸಿದ್ದೇಶ್ವರ ದೇವಸ್ಥಾನ ಕಮಿಟಿಯ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆAದು ಆರೋಪಿಸಿ ತಾಲೂಕು ಕರುಬರ ಸಂಘ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಸಮುದಾಯ ಮುಖಂಡರು, ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಇಂದು ತಾಲೂಕು ಕುರುಬರ ಸಂಘದಿAದ ಕನಕ ಜಯಂತಿ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಗಿತ್ತು. ಈ ವೇಳೆ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್ ಆಗಮಿಸಿದ್ದು, ಇದನ್ನು ಕಂಡ ಸಂಘದ ಮುಖಂಡರು, ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗುರು ರೇವಣಸಿದ್ದೇಶ್ವರ ದೇವಾಲಯ ಕಮಿಟಿಯ ಹಣ ದುರುಪಯೋಗ ಮಾಡಿರುವ ಆರೋಪ ಶ್ರೀನಿವಾಸ್ ಅವರ ಮೇಲಿದ್ದು, ಈ ಹಿನ್ನೆಲೆ ಕುರುಬ ಜಯಂತಿ ಕಾರ್ಯಕ್ರಮದ ಮೆರವಣಿಗೆ ಸಂದರ್ಭ ಸಂಘದ ಮುಖಂಡರು ಶ್ರೀನಿವಾಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮೆರವಣಿಗೆಯಲ್ಲಿ ಭಾಗವಹಿಸಲು ಅಡ್ಡಪಡಿಸಿದ್ದಲ್ಲದೇ ಮೆರವಣಿಗೆಯ ಟ್ರಾ÷್ಯಕ್ಟರ್ ಏರದಂತೆ, ಧ್ವಜಾರೋಹಣ ಮಾಡದಂತೆ ತಡೆದಿದ್ದಾರೆ. ನಂತರ ಶ್ರೀನಿವಾಸ್ ಅವರನ್ನು ಲೆಕ್ಕಿಸದೇ ಮುಖಂಡರು ಕಾರ್ಯಕ್ರಮವನ್ನು ನಡೆಸಿದ್ದಾರೆಂದು ತಿಳಿದು ಬಂದಿದೆ. ಮಾಜಿ ಶಾಸಕ ಜಿ.ಎಚ್. ಶ್ರೀನಿವಾಸ್ ವಿರುದ್ಧ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!